Karnataka news paper

ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸುವುದಿಲ್ಲ! ಸಿದ್ದರಾಮಯ್ಯ


ಹೈಲೈಟ್ಸ್‌:

  • ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸಲ್ಲ!
  • ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ
  • ಪಾದಯಾತ್ರೆ ನಡೆದೇ ನಡೆಯುತ್ತೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ ನಿಲ್ಲಿಸುವುದಿಲ್ಲ! ಹೀಗಂತ ಹೇಳಿದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗಲ್ಲ ಎಂದರು.

ಮೇಕೆದಾಟು ಪಾದಯಾತ್ರೆ ಘೋಷಣೆಯ ಸಂದರ್ಭದಲ್ಲೇ ವೀಕೆಂಡ್ ಕರ್ಫ್ಯೂ ಮತ್ತು ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ ಅವರು, ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಾವು ಜನರನ್ನ ಉಳಿಸುವ ಕೆಲಸವನ್ನು ಮಾಡುತ್ತೇವೆ ಎಂದರು.

ಒಂದೇ ದಿನದಲ್ಲಿ ದೇಶದ ಕೋವಿಡ್ ಪ್ರಕರಣ ಶೇ 55ರಷ್ಟು ಹೆಚ್ಚಳ: 58,097 ಮಂದಿಗೆ ಸೋಂಕು

ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗಲ್ಲ ಎಂದ ಅವರು, ಪಾದಯಾತ್ರೆಗೆ ನಿಲ್ಲಿಸಲು ಟಫ್ ರೂಲ್ಸ್ ತಂದ್ರಾ ಎಂಬ ಪ್ರಶ್ನೆಗೆ, ಅದೆಲ್ಲ ನನಗೆ ಗೊತ್ತಿಲ್ಲ, ಆದರೆ ಪಾದಯಾತ್ರೆ ಮಾಡಿಯೇ ಮಾಡ್ತೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಜನವರಿ 9 ರಿಂದ ಪಾದಯಾತ್ರೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಈ ಪಾದಯಾತ್ರೆಗೆ ಎಲ್ಲ ರೀತಿಯ ತಯಾರಿ ನಡೆಸಿಕೊಂಡಿದೆ. ಆದರೆ ಈ ನಡುವೆ ಕಠಿಣ ನಿರ್ಬಂಧಗಳನ್ನು ಸರ್ಕಾರ ಜಾರಿಗೊಳಿಸುವುದರ ಹಿಂದೆ ಪಾದಯಾತ್ರೆ ತಡೆಯುವ ಉದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಇದು ಕೋವಿಡ್‌ ಕರ್ಫ್ಯೂ ಅಲ್ಲ. ಬದಲಾಗಿ ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‌ಡೌನ್ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಮೇಲಿನ ದ್ವೇಷಕ್ಕಾಗಿ, ರಾಜಕಾರಣಕ್ಕಾಗಿ ಕರ್ಫ್ಯೂ ಜಾರಿಗೊಳಿಸಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವೀಕೆಂಡ್ ಕರ್ಫ್ಯೂ ಹಾಗೂ ಸಭೆ ಸಮಾರಂಭಗಳಿಗೆ ನಿರ್ಬಂಧದ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ಜನರ ಪ್ರಾಣ ಅಲ್ಲ, ಅವರಿಗೆ ಪಕ್ಷ ಮುಖ್ಯ. ಮೊದಲ ಅಲೆಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದಿದ್ದರಲ್ಲ ಅವರ ವಿರುದ್ಧ ಕೇಸ್ ದಾಖಲಿಸಲಿ. ಜನಾಶೀರ್ವಾದ ಯಾತ್ರೆ ಮಾಡಿದವರ ಮೇಲೆ ಕೇಸ್ ಹಾಕಲಿ.ಸಿಎಂ ಮದುವೆಯಲ್ಲಿ ಆಗಿಯಾಗಿದ್ದಾರೆ ಅವರ ವಿರುದ್ಧ ಕೇಸ್ ದಾಖಲಿಸಲಿ ಎಂದು ಸವಾಲು ಹಾಕಿದ್ದಾರೆ.



Read more

[wpas_products keywords=”deal of the day sale today offer all”]