
ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಜೆನ್ 1 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 68W ಟರ್ಬೋ ಪವರ್ ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 12GB + 256GB ಸ್ಟೋರೇಜ್ ಟಾಪ್ ಎಂಡ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಫುಲ್ HD+ POLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್ ಪವರ್ ಎಷ್ಟು
ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಜೆನ್ 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಓಎಸ್ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB RAM + 128GB, 8GB RAM + 128GB ಮತ್ತು 12GB + 256GB ಸಾಮರ್ಥ್ಯದಲ್ಲಿವೆ. ಎಸ್‌ಡಿ ಕಾರ್ಡ್ ಮೂಕ ಬಾಹ್ಯ ಮೆಮೊರಿ ವಿಸ್ತರಿಸುವ ಬಗ್ಗೆ ಮಾಹಿತಿ ಇಲ್ಲ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 60 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 68W ಟರ್ಬೋ ಪವರ್ ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಮಂಡಳಿಯಲ್ಲಿನ ಸಂವೇದಕಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕವನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ
ಮೊಟೊ ಎಡ್ಜ್ X30 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರವು CNY 3,199 (ಸುಮಾರು ರೂ. 38,000) ಆಗಿದೆ. 8GB + 256GB ಮತ್ತು 12GB + 256GB ಮಾಡೆಲ್‌ಗಳು ಇದ್ದು, ಇವುಗಳ ಬೆಲೆ ಕ್ರಮವಾಗಿ CNY 3,399 (ಸುಮಾರು ರೂ. 40,400) ಮತ್ತು CNY 3,599 (ಸುಮಾರು ರೂ. 42,800) ಆಗಿವೆ.

ಹಾಗೆಯೇ ಮೊಟೊರೊಲಾ ಕಂಪೆನಿ ಭಾರತದಲ್ಲಿ ಇಂದು (ಡಿ.10) ಹೊಸದಾಗಿ ಮೊಟೊ G51 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್ ಅನ್ನು ಒಳಗೊಂಡಿದೆ.

ಅಲ್ಲದೇ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 ಪ್ಲಸ್ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಮೊಟೊ G51 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ರಾಪಿಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 170.47×76.54×9.13mm ಅಳತೆ ಮತ್ತು 208 ಗ್ರಾಂ ತೂಕವನ್ನು ಪಡೆದಿದೆ.