Karnataka news paper

ಸರ್ಕಾರ ಯಾವುದೇ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿಲ್ಲ; ಗೋವಿಂದ ಕಾರಜೋಳ


ಹೈಲೈಟ್ಸ್‌:

  • ಸರ್ಕಾರ ಯಾವುದೇ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿಲ್ಲ
  • ಕಾಂಗ್ರೆಸ್ ನವರು ಪಾದಯಾತ್ರೆ ಮಾಡೋಕು ಮುನ್ನವೇ ಸತ್ಯದರ್ಶನ ಮಾಡಲಾಗುವುದು
  • ಬೆಂಗಳೂರಿನಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿಕೆ

ಬೆಂಗಳೂರು: ಸರ್ಕಾರ ಯಾವುದೇ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಇದು ಕೋವಿಡ್‌ ಕರ್ಫ್ಯೂ ಅಲ್ಲ ಬದಲಾಗಿ ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‌ಡೌನ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ನವರು ಪಾದಯಾತ್ರೆ ಮಾಡೋಕು ಮುನ್ನವೇ ಸತ್ಯದರ್ಶನ ಮಾಡಲಾಗುವುದು. ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸ್ತೇವೆ ಎಂದರು. ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಪಂಜಾಬ್ ನಲ್ಲಿ ಅವರದ್ದೇ ಸರ್ಕಾರ ಇದೆ. ಅಲ್ಲಿ ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ. ಅಮೇರಿಕಾದಲ್ಲೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ. ಕೇವಲ ಪಾದಯಾತ್ರೆ ಮೂಲಕ ಕಾಂಗ್ರೆಸ್ ನವರು ರಾಜಕೀಯ ಮಾಡ್ತಿದ್ದಾರೆ ಎಂದರು ಆರೋಪಿಸಿದರು.

ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‌ಡೌನ್! ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಅಧಿಕಾರ ಇದ್ದಾಗ ಏನೂ ಮಾಡದ ಕಾಂಗ್ರೆಸ್, ಈಗ ಅಧಿಕಾರಕ್ಕಾಗಿ ಪಾದಯಾತ್ರೆ ಮಾಡ್ತಿದ್ದಾರೆ. ಅವರ ಕಾಲದಲ್ಲಿ ಏನ್ ಮಾಡಿದ್ರು ಎಂದು ಮಾಧ್ಯಮಗಳ ಮುಂದೆ ಇಡಲಿ ಕೃಷ್ಟೆಯ ಕಡೆ ಪಾದಯಾತ್ರೆ ಮಾಡಿದ್ರು, ಏನಾಯ್ತು..? ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿಗಳ ರ್ಯಾಲಿಗೆ ಅವಕಾಶ ಇದೆಯಲ್ಲ ಎಂಬ ಕೈ ನಾಯಕರ ಪ್ರಶ್ನೆ ವಿಚಾರವಾಗಿ, ಪ್ರಧಾನಿ ಕಾರ್ಯಗಳಿಗೆ ಅನುಮತಿ ನೀಡ್ತಾರೆ, ಇಲ್ಲಾ ಎಂಬ ಪ್ರಶ್ನೆ ಅಲ್ಲ. ರಾಜ್ಯದಲ್ಲಿ ಜನರ ಆರೋಗ್ಯ ಕಾಪಾಡೋದಷ್ಟೇ ಪ್ರಶ್ನೆ. ಜನರ ರಕ್ಷಣೆ ಮಾಡುವುದಕ್ಕಾಗಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ. ಸರ್ಕಾರ ಯಾವುದೇ ಹೋರಾಟಗಾವನ್ನು ಹತ್ತಿಕ್ಕುವ ಕೆಲಸ ಮಾಡ್ತಿಲ್ಲ. ಮುಂದೆ ಸಮಯ -ಸಂದರ್ಭ ನೋಡ್ಕೊಂಡು ಪಾದಯಾತ್ರೆ ಮಾಡಲಿ ಎಂದರು.



Read more

[wpas_products keywords=”deal of the day sale today offer all”]