PTI
ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ಮೂರನೇ ಅಲೆ ದೆಹಲಿಗೆ ಅಪ್ಪಳಿಸಿದೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ 10,000 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಹೇಳಿದ್ದಾರೆ.
ಇಂದು 10 ಸಾವಿರ ಪಾಸಿಟಿವ್ ಪ್ರಕರಣಗಳು ವರದಿಯಾದರೆ, ಪಾಸಿಟಿವ್ ದರ ಶೇಕಡಾ 10ಕ್ಕೆ ಏರಿಕೆಯಾಗಲಿದೆ. ಕೊರೋನಾ ಪಾಸಿಟಿವ್ ಬಂದ ಎಲ್ಲಾ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲು ಸಾಧ್ಯವಿಲ್ಲದ ಕಾರಣ ಈಗ 300-400 ಮಾದರಿಗಳನ್ನು ಮಾತ್ರ ಕಳುಹಿಸಲಾಗುತ್ತಿದೆ ಎಂದು ದೆಹಲಿ ಸಚಿವರು ಹೇಳಿದ್ದಾರೆ.
ಇದನ್ನು ಓದಿ: ಕೊರೋನಾ ಉಲ್ಬಣ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ, ಸರ್ಕಾರಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ
ದೇಶದಲ್ಲಿ ಈಗಾಗಲೇ ಓಮಿಕ್ರಾನ್ ರೂಪಾಂತರಿ ವೈರಸ್ ಹರಡಿದೆಯೇ ಎಂದು ನಿರ್ಧರಿಸಲು ದೆಹಲಿ ಸರ್ಕಾರವು ಎಲ್ಲಾ COVID-19 ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಕಳುಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಸುಮಾರು 15,000 ಸಕ್ರಿಯ ಪ್ರಕರಣಗಳಿದ್ದು, 14 ರೋಗಿಗಳು ಮಾತ್ರ ವೆಂಟಿಲೇಟರ್‌ಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ಬಾರಿ ದೆಹಲಿಯಲ್ಲಿ ಇದೇ ಸಂಖ್ಯೆಯ ಸಕ್ರಿಯ ಪ್ರಕರಣಗಳು ಇದ್ದಾಗ 20 ಪಟ್ಟು ಹೆಚ್ಚು ರೋಗಿಗಳು ವೆಂಟಿಲೇಟರ್ ಬೆಂಬಲದಲ್ಲಿದ್ದರು ಎಂದು ಜೈನ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೋವಿಡ್-19 ಪರೀಕ್ಷೆಯನ್ನು ಸಹ ಹೆಚ್ಚಿಸಲಾಗಿದೆ ಮತ್ತು ಮಂಗಳವಾರ ಸುಮಾರು 90,000 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
Read more
[wpas_products keywords=”deal of the day”]