Karnataka news paper

ಜಾರ್ಖಾಂಡ್ ನಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ದುರ್ಮರಣ


The New Indian Express

ಪಾಕೂರ್: ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ಬಸ್ ಮತ್ತು ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 24 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೇರ್‌ಕೋಲಾ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ವೇಗವಾಗಿ ಬಂದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅಜಿತ್ ಕುಮಾರ್ ವಿಮಲ್ ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ 24 ಮಂದಿಯ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬರ್ಹರ್ವಾದಿಂದ ದುಮ್ಕಾಗೆ ಹೋಗುತ್ತಿದ್ದ ಬಸ್ ಮತ್ತು ಎಲ್‌ಪಿಜಿ ಸಿಲಿಂಡರ್ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಂಜು ಮುಸುಕಿದ ಕಾರಣ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ.

ಅದೃಷ್ಟವಶಾತ್ ವಾಹನದಲ್ಲಿದ್ದ ಯಾವುದೇ ಸಿಲಿಂಡರ್ ಗಳೂ ಸ್ಫೋಟಗೊಂಡಿಲ್ಲ. ಸ್ಫೋಟಗೊಂಡಿದ್ದೇ ಆಗಿದ್ದರೆ, ಮತ್ತಷ್ಟು ಜನರು ಸಾವನ್ನಪ್ಪುವ ಸಾಧ್ಯತೆಗಳಿರುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.



Read more

[wpas_products keywords=”deal of the day”]