Karnataka news paper

ಬೆನ್ನಿಗಿರಿದ ‘ಬ್ರೂಟಸ್‌’ ಯಾರು? ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ಕಿಡಿ


ಹೈಲೈಟ್ಸ್‌:

  • ಸಿದ್ದರಾಮಯ್ಯ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ವಾಗ್ಧಾಳಿ
  • ಬೆನ್ನಿಗಿರಿದ ‘ಬ್ರೂಟಸ್‌’ ಯಾರು? ಎಂದು ಪ್ರಶ್ನಿಸಿದ ಎಚ್‌ಡಿಕೆ
  • ಮಿಸ್ಟರ್ ಸಿದ್ದ ಸೂತ್ರಧಾರ ಎಂದು ಎಚ್‌ಡಿಕೆ ಲೇವಡಿ

ಬೆಂಗಳೂರು: ಬೆನ್ನಿಗಿರಿದ ‘ಬ್ರೂಟಸ್‌’ ಯಾರು? ಹೀಗಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದ ಸೂತ್ರಧಾರ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ‘ವಿಷ’. ಆ ವಿಷವೇ ನಿಮಗೆ ಮುಳುವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗಳಿಗೆ ಉತ್ತರವಾಗಲಿ ಅಧಿವೇಶನ; ಮುಂದಿನ ಸಾಲಿನ ನಾಯಕರೆಲ್ಲರೂ ಕಿತ್ತೂರು-ಕಲ್ಯಾಣ ಕರ್ನಾಟಕದವರೇ!

ಅಹಾ!! ʼಕೋಲಾರದಲ್ಲಿ ಕಲರ್‌ಫುಲ್‌ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್‌ಮೆಂಟ್‌ ರಾಜಕಾರಣʼದ ಹರಿಕಾರರು ನೀವಲ್ಲವೇ? ವಿನಾಶಕಾಲೇ ವಿಪರೀತ ಸುಳ್ಳು!! ಎಂದು ಟ್ವೀಟ್ ಮೂಲಕ ದಾಳಿ ನಡೆಸಿದ್ದಾರೆ. ಅಧಿಕಾರಕ್ಕಾಗಿ ಜೆಡಿಎಸ್ ಮನೆ ಬಾಗಿಲಿಗೆ ನಾನು ಹೋಗಿಲ್ಲ. ಆದರೆ ಆಗ ಮಾತುಕತೆ ಆಗಿರುವುದು ನಿಜ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಹೇಳಿಕೆ ಕೊಟ್ಟಿದ್ದರು.



Read more