Karnataka news paper

ಕೆಎಸ್‌ಟಿಡಿಸಿಯಿಂದ ಅನಧಿಕೃತ ಜಂಗಲ್ ಲಾಡ್ಜ್- ರೆಸಾರ್ಟ್ಸ್: ಪಿಐಎಲ್ ವಜಾ, 50 ಸಾವಿರ ರೂ. ದಂಡ


The New Indian Express

ಬೆಂಗಳೂರು: ಕೊಡಗು ಜಿಲ್ಲೆಯ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‍ಟಿಡಿಸಿ) ಅಕ್ರಮವಾಗಿ ‘ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್’ ನಡೆಸುತ್ತಿದೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಈ ಕುರಿತು ಕೊಡಗಿನ ಪಿ.ಎಸ್.ಮೋಹನ್ ಹಾಗೂ ಇತರೆ ಐವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ನೀಡಿದೆ. ದಂಡದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಿದೆ.

ಪಿ.ಎಸ್.ಮೋಹನ್ ಸೇರಿದಂತೆ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ  ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ದಂಡದ ಮೊತ್ತವನ್ನು ಒಂದು ತಿಂಗಳ ಒಳಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಿ’ ಎಂದು ಅರ್ಜಿದಾರರಿಗೆ ಸೂಚಿಸಿದೆ.

ಇದನ್ನೂ ಓದಿ: ಕೋವಿಡ್-19 ಹೆಚ್ಚಳ: ಹೈಕೋರ್ಟ್ ಸೇರಿದಂತೆ ಬೆಂಗಳೂರಿನ ನ್ಯಾಯಾಲಯಗಳಲ್ಲಿ ವರ್ಚುವಲ್ ಮೂಲಕ ವಿಚಾರಣೆ

ಅರ್ಜಿದಾರರು ಹೇಳಿರುವಂತೆ ಕೊಡಗು ಜಿಲ್ಲೆಯ ದುಬಾರೆ ಪ್ರದೇಶದಲ್ಲಿ ಖಾಸಗಿ ಸಂಸ್ಥೆಗಳು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ನಿರ್ಮಿಸಲು ಕೇಂದ್ರ ಸರಕಾರದಿಂದ ಪೂರ್ವಾನುಮತಿ ಪಡೆಯಬೇಕಿಲ್ಲ. ಈ ಜಾಗ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್‍ಟಿಡಿಸಿ) ನಿಯಂತ್ರಣಕ್ಕೆ ಒಳಪಟ್ಟಿದ್ದು, ಸಂಪೂರ್ಣ ರಾಜ್ಯ ಸರಕಾರದ ಆಡಳಿತಕ್ಕೆ ಸೇರುತ್ತದೆ.

ಆದರೂ ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ತರಲು ಪಿಐಎಲ್ ಸಲ್ಲಿಸಿದ್ದಾರೆ. ನ್ಯಾಯಾಲಯದ ಅಮೂಲ್ಯ ಸಮಯ ಹಾಳು ಮಾಡಿದ್ದರಿಂದ ಅವರಿಗೆ 50 ಸಾವಿರ ರೂ. ದಂಡ ವಿಧಿಸಿಲಾಗುತ್ತಿದೆ ಎಂದು ಆದೇಶ ಹೊರಡಿಸಲಾಗಿದೆ.

‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್, ಕೆಎಸ್‌ಟಿಡಿಸಿ ನಿಯಂತ್ರಣಕ್ಕೆ ಒಳಪಟ್ಟಿದೆ. ಇದರ ವ್ಯವಸ್ಥಾಪಕ ನಿರ್ದೇಶಕರು ಐಎಫ್‌ಎಸ್ ಶ್ರೇಣಿಗೆ ಸೇರಿದ ಸರ್ಕಾರಿ ಅಧಿಕಾರಿ. ಇದರಲ್ಲಿ ಖಾಸಗಿ ವ್ಯಕ್ತಿಗಳ ಹಿತಾಸಕ್ತಿ ಇಲ್ಲ. ಆದ್ದರಿಂದ, ಜಂಗಲ್ ಲಾಡ್ಜ್‌ಸ್ ಮತ್ತು ರೆಸಾರ್ಟ್ಸ್ ನಿರ್ಮಿಸಲು ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ‘ ಎಂದು ನ್ಯಾಯಪೀಠ ತಿಳಿಸಿದೆ. ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ಉಂಟು ಮಾಡಲು ಈ ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.



Read more

[wpas_products keywords=”deal of the day”]