Karnataka news paper

ಹಾಡಿನೊಂದಿಗೆ ‘ಬೈರಾಗಿ’ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲಿದ್ದಾರೆ ಶಿವರಾಜ್ ಕುಮಾರ್


The New Indian Express

ವಿಜಯ್ ಮಿಲ್ಟನ್ ನಿರ್ದೇಶನದ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ನಟನೆಯ ಬೈರಾಗಿ ಸಿನಿಮಾ ಶೂಟಿಂಗ್ ಅಂತಿಮ ಹಂತದಲ್ಲಿದೆ.

ವಿಜಯ್ ಮಿಲ್ಟನ್ ನಿರ್ದೇಶನದ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಅಂತಿಂ ಹಂತ ತಲುಪಿದೆ. ಇಂಟ್ರುಡಕ್ಷನ್ ಸಾಂಗ್ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದರು. ಹಾಡಿನ ಶೂಟಂಗ್ ಗಾಗಿ ಅದ್ಧೂರಿ ಸೆಟ್ ನಿರ್ಮಾಣ ಮಾಡಲಾಗಿದೆ. ಹಲವು ಸಂಖ್ಯೆಯ ಜ್ಯೂನಿಯರ್ ಆರ್ಟಿಸ್ಟ್ ಗಳು ಶಿವಣ್ಣ ಜೊತೆ ಹೆಜ್ಜೆ ಹಾಕಿದ್ದಾರೆ.

ಇತ್ತೀಚೆಗೆ ಶಿವಣ್ಣ, ಧನಂಜಯ್, ಪೃಥ್ವಿ ಅಂಬರ್ ಮತ್ತು ಯಶ ಶಿವಕುಮಾರ್ ಅವರನ್ನು ಒಳಗೊಂಡ  ಹಾಡಿಗೆ ಮುರಳಿ ನೃತ್ಯ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ವಿಜಯ್ ಮಿಲ್ಟನ್ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರದಲ್ಲಿ ಚಿಕ್ಕಣ್ಣ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರಂತೇ ನೇತ್ರದಾನದ ಪ್ರತಿಜ್ಞೆ ಮಾಡಿದ ಶಿವರಾಜ್‍ಕುಮಾರ್: ‘ಅಕ್ಷಿ’ ಚಿತ್ರದ ಬಗ್ಗೆ ಮೆಚ್ಚುಗೆ

ಬೈರಾಗಿ ಚಿತ್ರದಲ್ಲಿ ಅಂಜಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ . ಶಿವಣ್ಣ ಮತ್ತು ಧನಂಜಯ್  ಟಗರು ಸಿನಿಮಾ ನಂತರ ಮತ್ತೆ ಬೆಳ್ಳಿ ಪರದೆಯ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಛಾಯಾಗ್ರಹಣವನ್ನು ನಿರ್ದೇಶಕ ವಿಜಯ್ ಮಿಲ್ಟನ್ ನಿರ್ವಹಿಸುತ್ತಿದ್ದು, ಅನೂಪ್ ಸೀಳಿನ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.     

ಪೋಸ್ಟ್ ಪ್ರೊಡಕ್ಷನ್ ಕೆಲಸ ಅರ್ಧಕ್ಕೆ ನಿಂತಿದ್ದು, ಮುಂದಿನ ತಿಂಗಳು ಮೊದಲ ಸಿನಿಮಾದ ಮೊದಲ ಪ್ರತಿಯನ್ನು ಹೊರತರುತ್ತೇವೆ, ಬಿಡುಗಡೆಯ ಯೋಜನೆಗಳು ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ನಿರ್ಮಾಪಕ  ಕೃಷ್ಣ ಸಾರ್ಥಕ್ ಹೇಳಿದ್ದಾರೆ.



Read more…

[wpas_products keywords=”party wear dress for women stylish indian”]