The New Indian Express
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಒಂದೊಂದು ಕೋವಿಡ್ ಕೇರ್ ಕೇಂದ್ರಗಳ ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಸಿಎಸ್ಆರ್ ಅನುದಾನದಡಿ ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರವನ್ನು ಗೌರವನ್ನು ಗುಪ್ತಾ ಅವರು ಪರಿಶೀಲಿಸಿದರು.
ಇದನ್ನೂ ಓದಿ: ಕೋವಿಡ್-19 ಹೆಚ್ಚಳ: ಹೈಕೋರ್ಟ್ ಸೇರಿದಂತೆ ಬೆಂಗಳೂರಿನ ನ್ಯಾಯಾಲಯಗಳಲ್ಲಿ ವರ್ಚುವಲ್ ಮೂಲಕ ವಿಚಾರಣೆ
ಇದೇ ಸಂದರ್ಭದಲ್ಲಿ ನಗರದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರಿಕಯಾಗುತ್ತಿವೆ. ಹಾಗಾಗಿ 2ನೇ ಅಲೆಯ ಸಂದರ್ಭದಲ್ಲಿ ತೆರೆಯಲಾಗಿದ್ದ ಕೋವಿಡ್ ಆರೈಕೆ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ ಒಂದು ಕೋವಿಡ್ ಕೇರ್ ಕೇಂದ್ರವನ್ನು ಗುರುತಿಸಿ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲಾ ಕೋವಿಡ್ ಆರೈಕೆ ಕೇಂದ್ರದ ಹೆಸರು ಮತ್ತು ವಿಳಾಸ, ಒಟ್ಟು ಹಾಸಿಗೆಗಳ ಸಂಖ್ಯೆ, ಆಕ್ಸಿಜನ್ ಹಾಸಿಗೆಗಳ ಸಂಖ್ಯೆ, ಲಭ್ಯವಿರುವ ಆಕ್ಸಿಜನ್ ಕಾನ್ಸಂಟ್ರೋಟರ್ಸ್ ಸಂಖ್ಯೆ ಸೇರಿದಂತೆ ಇನ್ನಿತರೆ ಮಾಹಿತಿಯನ್ನು ಕೂಡಲೇ ಸಂಗ್ರಹಿಸಿ ವರದಿ ಮಾಡುವಂತೆ ಮುಖ್ಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ಶಾಸಕ, ಸಚಿವ ಗೋಪಾಲಯ್ಯ ಅವರು ಮಾತನಾಡಿ, ನಂದಿನಿ ಬಡಾವಣೆಯ ಕೆಂಪೇಗೌಡ ಸಮುದಾಯ ಭವನದಲ್ಲಿ ಈ ಹಿಂದೆಯೇ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಇದೀಗ ಸಿಎಸ್ಆರ್ ಅನುದಾನದ ಅಡಿ ಆಕ್ಸಿಜನ್ ಪ್ಲಾಂಟ್, ಕಟ್ಟಡದ ಮೊದಲನೇ ಮಹಡಿಯಲ್ಲಿ 18 ಆಕ್ಸಿಜನ್ ಹಾಸಿಗಗಳ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಸಿಬ್ಬಂದಿ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಿಕೊಡು ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಮಾಡಲು ಕ್ರಮವಹಿಸಲಾಗಿದೆ. ಆಕ್ಸಿಜನ್ ಇನ್ನಿತರೆ ಸೌಲಭ್ಯವಿದೆ ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆರಂಭ: ರಾಜಧಾನಿ ಬೆಂಗಳೂರಿನಲ್ಲಿ ದಿಢೀರ್ ಏರಿದ ಸೋಂಕು, ಹೆಚ್ಚಿದ ಆತಂಕ
ಕೋವಿಡ್ ಕೇಂದ್ರ ಕೇಂದ್ರಗಳಿಗೆ ನೆರವು ಮತ್ತು ಅವುಗಳ ನಿರ್ವಹಣೆಗಾಗಿ ನಾಗರಿಕರು, ನಿವಾಸಿ ಕಲ್ಯಾಣ ಸಂಘಗಳು ಮತ್ತು ಎನ್‌ಜಿಒಗಳ ಸಹಾಯವನ್ನು ಬಿಬಿಎಂಪಿ ತೆಗೆದುಕೊಳ್ಳಲಿದ್ದು, ಎಲ್ಲಾ ಕೋವಿಡ್ ಕೇರ್ ಕೇಂದ್ರಗಳಲ್ಲಿ ಮಾರ್ಷಲ್‌ಗಳನ್ನು ನಿಯೋಜನೆ, ಆ್ಯಂಬುಲೆನ್ಸ್, ಆಕ್ಸಿಜನ್ ವ್ಯವಸ್ಥೆಗಳಲ್ಲಿ ಕಲ್ಪಿಸಲಾಗುತ್ತಿದೆ ಎಂದು ತಿಳಿದುಬಂದಿದ. ಕೋವಿಡ್ -19 ಪರೀಕ್ಷೆಯನ್ನು ಕೂಡ ಈ ಕೇಂದ್ರಗಳಲ್ಲಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
Read more
[wpas_products keywords=”deal of the day”]