ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ನಿಯಮಗಳನ್ನು ಜಾರಿ ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ, ಸರ್ಕಾರದ ಏಕಾಏಕಿ ನಿರ್ಧಾರದ ಹಿಂದೆ ಮೇಕೆದಾಟು ಪಾದಯಾತ್ರೆ ತಡೆಯುವ ದುರುದ್ದೇಶವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ಧಾರೆ.
ಸಂಪುಟ ಸಭೆಯಲ್ಲಿ ಕೋವಿಡ್ ಆತಂಕ, ಕಾಂಗ್ರೆಸ್ ಪಾದಯಾತ್ರೆ ಚರ್ಚೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆತಂಕದ ನಡುವೆಯೂ ಕಾಂಗ್ರೆಸ್ ಜನವರಿ 9 ರಂದು ಹಮ್ಮಿಕೊಂಡಿರುವ ಪಾದಯಾತ್ರೆಯ ಬಗ್ಗೆ ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಗುರುವಾರ ಮಧ್ಯಾಹ್ನ ಸಂಪುಟ ಸಭೆ ನಡೆಯಲಿದ್ದು, ಪಾದಯಾತ್ರೆ ಘೋಷಣೆ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಏನಾಗಿರಬೇಕು ಎಂಬ ಚರ್ಚೆ ನಡೆಯುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಒಳಗೊಂಡು ಕಠಿಣ ನಿಯಮಗಳು ಜಾರಿಯಲ್ಲಿದೆ. ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ ಐದು ಗಂಟೆಯ ವರೆಗೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಹಾಗೂ ಕಠಿಣ ನಿಯಮಗಳು ಇದ್ದರೂ ಕೂಡಾ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಯಾವುದೇ ಕಾರಣಕ್ಕೂ ಪಾದಯಾತ್ರೆಯನ್ನು ನಿಲ್ಲಿಸುವುದಿಲ್ಲ ಎಂದು ಈಗಾಗಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಕ್ರಮದ ಬಗ್ಗೆ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
Read more
[wpas_products keywords=”deal of the day sale today offer all”]