
ನವದೆಹಲಿ: 21 ವರ್ಷಗಳ ನಂತರ ಭಾರತಕ್ಕೆ ಭುವನ ಸುಂದರಿ ಪಟ್ಟ ಒಲಿದಿದೆ. ಪಂಜಾಬ್ ಮೂಲದ 21ರ ಹರೆಯದ ಸುಂದರಿ ಹರ್ನಾಜ್ ಕೌರ್ ಸಂಧು, 70ನೇ ‘ಮಿಸ್ ಯುನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಈ ಹಿಂದೆ ಎರಡು ಬಾರಿ ಮಾತ್ರ ಭಾರತಕ್ಕೆ ಭುವನ ಸುಂದರಿ ಪಟ್ಟ ಒಲಿದಿತ್ತು. 2000ನೇ ಇಸವಿಯಲ್ಲಿ ಲಾರಾ ದತ್ತ ಮತ್ತು 1994ರಲ್ಲಿ ಸುಶ್ಮಿತಾ ಸೆನ್ ಪ್ರಶಸ್ತಿಯನ್ನು ಗೆದ್ದಿದ್ದರು.
70ನೇ ಮಿಸ್ ಯುನಿವರ್ಸ್ ಸ್ಪರ್ಧೆಯು ಇಸ್ರೇಲ್‌ನ ಇಲಾಟ್‌ನಲ್ಲಿ ಆಯೋಜನೆಯಾಗಿತ್ತು.
ಪಂಜಾಬ್‌ನ ಚಂಡೀಗಡ ಮೂಲದ ರೂಪದರ್ಶಿ ಹರ್ನಾಜ್, ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾರೆ.
The new Miss Universe is…India!!!! #MISSUNIVERSE pic.twitter.com/DTiOKzTHl4
— Miss Universe (@MissUniverse) December 13, 2021
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…