Karnataka news paper

ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್, ಕ್ವಾರಂಟೈನ್


The New Indian Express

ಬಳ್ಳಾರಿ: ಬಳ್ಳಾರಿಯ ವಿಜಯನಗರ ವೈದ್ಯಕೀಯ ಕಾಲೇಜಿನ (ವಿಮ್ಸ್) 31 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿತ ಎಲ್ಲಾ ವಿದ್ಯಾರ್ಥಿಗಳು ಜಿಲ್ಲಾ ಆಸ್ವತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದು, ಜಿಲ್ಲಾಡಳಿತ ಆಸ್ಪತ್ರೆಯನ್ನು ಸೀಲ್ ಮಾಡಿದೆ. 

ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪತಿ ಮತ್ತು ವಿಮ್ಸ್ ಆಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮಿಸುತ್ತಿದ್ದು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 21 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕೊರೋನಾ
 

ರೋಗಿಗಳಿಗೆ ಚಿಕಿತ್ಸೆ ನೀಡುವಾಗ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರಬಹುದು ಎಂದು ಹಿರಿಯ ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಎಲ್ಲಾ 31 ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಮಂಗಳವಾರ ನಾಲ್ಕು ವಿದ್ಯಾರ್ಥಿಗಳಿಗೆ ಕೋವಿಡ್-19 ಸೌಮ್ಯ ಲಕ್ಷಣ ಕಂಡುಬಂದಿತ್ತು. ನಂತರ ಬುಧವಾರ ಪರೀಕ್ಷಿಸಿದಾಗ 17 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸಂಜೆ ವೇಳೆಗೆ ಇನ್ನೂ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಕೋವಿಡ್ -19 ಮಾರ್ಗಸೂಚಿಗಳ ಪ್ರಕಾರ, ವಿದ್ಯಾರ್ಥಿಗಳು ಉಳಿದುಕೊಂಡಿರುವ ಹಾಸ್ಟೆಲ್ ನ್ನು ಸೀಲ್ ಮಾಡಿದ್ದೇವೆ. ನೈರ್ಮಲ್ಯೀಕರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಹೇಗೆ ಸೋಂಕು ತಗುಲಿತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದ್ದು, ಯಾರೂ ಕೂಡಾ ಭಯಪಡಬೇಕಾದ ಅಗತ್ಯವಿಲ್ಲ. ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಬಳ್ಳಾರಿಯ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಶೀಘ್ರದಲ್ಲಿಯೇ ಅವರು ಗುಣಮುಖರಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಯಾದೃಚಿಕವಾಗಿ ಪರೀಕ್ಷೆ ನಡೆಸಲು ಆದೇಶಿಸಿರುವುದಾಗಿ ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡ ತಿಳಿಸಿದ್ದಾರೆ. 



Read more

[wpas_products keywords=”deal of the day”]