Online Desk
ಲಖನೌ: ಸಮಾಜವಾದಿ ಪಕ್ಷದ ಸ್ಥಳೀಯ ನಾಯಕ ಫಿರೋಜ್ ಅಹ್ಮದ್ ಅಲಿಯಾಸ್ ಪಪ್ಪು ಅವರನ್ನು ಉತ್ತರ ಪ್ರದೇಶದ ಬಲರಾಮ್‍ಪುರದ ಅವರ ಮನೆಯ ಸಮೀಪ ಅಪರಿಚಿತ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ತುಳಸಿಪುರ ನಗರ ಪಂಚಾಯತ್‍ನ ಮಾಜಿ ಅಧ್ಯಕ್ಷ ಅಹ್ಮದ್ ಮುಂಬರುವ ಉತ್ತರ ಪ್ರದೇಶ ಚುನಾವಣೆಯ ಪ್ರಚಾರ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಅವರ ಕತ್ತು ಸೀಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಟುಂಬದವರು ಅವರನ್ನು ತುಳಸಿಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪರಾಧಿಗಳ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಘಟನೆಯ ಕುರಿತು ಮಹತ್ವದ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಟಿಯಾಲ್ ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಎಸ್ ಪಿ ಯಾದವ್ ಸೇರಿದಂತೆ ಅವರ ಬೆಂಬಲಿಗರು ಹಾಗೂ ಸಮಾಜವಾದಿ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ತಲುಪಿದರು. ಯಾದವ್ ಬುಧವಾರ ಸಮಾಜವಾದಿ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಅಮಾನತುಗೊಳಿಸುವುದಾಗಿ ಘೋಷಿಸಿದರು ಮತ್ತು ಅಪರಾಧಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು.
ಏತನ್ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ಪಕ್ಷವು ಐದು ಸದಸ್ಯರ ಸಮಿತಿಯನ್ನು ರಚಿಸಿದೆ ಮತ್ತು ಅದರ ವರದಿಯನ್ನು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಕಳುಹಿಸಿದೆ. ಪಕ್ಷದ ಮೂಲಗಳ ಪ್ರಕಾರ, ತುಳಸಿಪುರ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಟಿಕೆಟ್‍ಗಾಗಿ ಪಪ್ಪು ಪ್ರಬಲ ಆಕಾಂಕ್ಷಿಯಾಗಿದ್ದರು.
Read more
[wpas_products keywords=”deal of the day”]