Source : The New Indian Express
ನವದೆಹಲಿ: ಮೊನ್ನೆ ಶನಿವಾರಕ್ಕಿಂತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತಗ್ಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7 ಸಾವಿರದ 350 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 202 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 91 ಸಾವಿರದ 456ಕ್ಕೆ ಇಳಿಕೆಯಾಗಿದ್ದು ಕಳೆದ 561 ದಿನಗಳಲ್ಲಿ ಕಡಿಮೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 7 ಸಾವಿರದ 973 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,30,768ಕ್ಕೆ ತಲುಪಿದೆ.
FAQs On Omicron.@cmofKarnataka @mla_sudhakar @Comm_dhfwka @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/FBB90ZHYzK
— K’taka Health Dept (@DHFWKA) December 13, 2021
ದೇಶದಲ್ಲಿ ಸೋಂಕಿನಿಂದ ಗುಣಮುಖ ಹೊಂದುತ್ತಿರುವ ಪ್ರಮಾಣ ಶೇಕಡಾ 98.37ರಷ್ಟಿದ್ದು ಮಾರ್ಚ್ 2020ರ ನಂತರ ಅಧಿಕವಾಗಿದೆ. ಭಾರತದಲ್ಲಿ ಇದುವರೆಗೆ 65.66 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 133.17 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.