The New Indian Express
ಬೆಂಗಳೂರು: ಮೇಕೆದಾಟು ಯೋಜನೆ ಪಾದಯಾತ್ರೆ ಕುರಿತು ತಮ್ಮ ನಿಲುವನ್ನು ಪುನರುಚ್ಛರಿಸಿರುವ ಕರ್ನಾಟಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ನನ್ನ ಪ್ರಾಣ ಹೋದರೂ ಸರಿ ಮೇಕೆದಾಟು ಪಾದಯಾತ್ರೆ ಮಾತ್ರ ನಿಲ್ಲುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ,
ಏನೇ ಮಾಡಿದರೂ ರಾಜ್ಯ ಸರ್ಕಾರ ಪಾದಯಾತ್ರೆ ತಡೆಯಲಾಗದು ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದರು.
ಇದನ್ನೂ ಓದಿ: ವಿಧಾನ ಪರಿಷತ್ ನೂತನ ಸದಸ್ಯರ ಪ್ರತಿಜ್ಞಾ ವಿಧಿ ಸ್ವೀಕಾರ: ಕೊರೋನಾ ನಿಯಮ ಉಲ್ಲಂಘನೆ, ಕಾಂಗ್ರೆಸ್ ಕೆಂಡಾಮಂಡಲ
ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಸಿಕ್ಕಿರುವ ಅಭೂತಪೂರ್ವ ಪ್ರತಿಕ್ರಿಯೆಯನ್ನು ಸಹಿಸಲಾಗದೆ, ಇತ್ತೀಚಿನ ಎಂಎಲ್‌ಸಿ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿ ಬಂದಿರುವುದನ್ನು ಅರಗಿಸಿಕೊಳ್ಳಲಾಗದೆ ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರ ಷಡ್ಯಂತ್ರ ರೂಪಿಸುತ್ತಿದೆ. ಬಿಜೆಪಿ ಸರ್ಕಾರ ಕೀಳು ರಾಜಕೀಯಕ್ಕಾಗಿ ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿದೆ. ಬಿಜೆಪಿ ಸರ್ಕಾರ ಕೀಳು ರಾಜಕೀಯಕ್ಕಾಗಿ ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರ ಉತ್ಪ್ರೇಕ್ಷೆಯಿಂದ ಕೋವಿಡ್ ಸಂಖ್ಯೆ ಹೆಚ್ಚಳ ಮಾಡಿ, ರಾಜ್ಯದಲ್ಲಿ ನಿರ್ಬಂಧ ಹೇರಿದೆ ಎಂದು ಹೇಳಿದ್ದಾರೆ.
ರಾಮನಗರದ ಪ್ರವಾಸಿ ತಾಣಗಳಲ್ಲಿ ಸರ್ಕಾರ ನಿರ್ಬಂಧ ಹೇರಿದೆ. ಇದು ಓಮಿಕ್ರಾನ್ ಅಲ್ಲ, ಬಿಜೆಪಿ ಕಾಯಿಲೆಯಾಗಿದೆ. 15 ದಿನಗಳ ಹಿಂದೆಯೇ ಸಂಗಮದಲ್ಲಿ ಹೋಟೆಲ್ ಬುಕ್ ಮಾಡಿದ್ದೆವು. ಆದರೆ ಈಗ ಹೊಟೆಲ್ ಮಾಲೀಕರನ್ನು ಹೆದರಿಸಿ ಹೋಟೆಲ್ ಬಂದ್ ಮಾಡಿಸುತ್ತಿದ್ದಾರೆ. ಹೋಟೆಲ್ನಲ್ಲಿ ನೀವು ರೂಮ್ ನೀಡದಿದ್ದರೆ ಪ್ರಕೃತಿ ಮಡಿಲಲ್ಲೇ ಮಲಗುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾನೂನು ಉಲ್ಲಂಘಿಸುವುದಿಲ್ಲ, ನಾವು ಪಾದಯಾತ್ರೆ ಮಾಡಿಯೇ ಸಿದ್ಧ: ಸಿದ್ದರಾಮಯ್ಯ
ಸರ್ಕಾರ ಯಾರನ್ನಾದರೂ ಬಂಧಿಸಲಿ, ಏನಾದರೂ ಮಾಡಿಕೊಳ್ಳಲಿ. ನಿಮಗೆ ಕಾನೂನು, ಸಂವಿಧಾನ, ಪ್ರಜಾಪ್ರಭುತ್ವದ ಹಕ್ಕುಗಳು, ಹೋರಾಟದ ಮೇಲೆ ಗೌರವಿಲ್ಲ. ನಿಮಗೆ ನೀತಿ, ಸಂಸ್ಕೃತಿ ಇಲ್ಲ. ನಾವು ನಡೆಯುತ್ತೇವೆ. ಯಾರೂ ಇಲ್ಲದಿದ್ದರೂ ನಾವಿಬ್ಬರೇ ನಡೆಯುತ್ತೇವೆ. ನಾನು ಪಕ್ಷದ ಅಧ್ಯಕ್ಷನಾಗಿ ಪಕ್ಷವನ್ನು ಪ್ರತಿನಿಧಿಸಿದರೆ, ಸಿದ್ದರಾಮಯ್ಯ 100 ಶಾಸಕರನ್ನು ಪ್ರತಿನಿಧಿಸುತ್ತಿದ್ದಾರೆ. ನಾವಿಬ್ಬರು ಪಾದಯಾತ್ರೆ ಉದ್ದಕ್ಕೂ ನಡೆಯುತ್ತೇವೆ. ನಮ್ಮ ಜೊತೆಯಲ್ಲಿ ನಾಲ್ಕೈದು ಮಂದಿ ಇರುತ್ತಾರೆ,
ನಾವು ರಾಜ್ಯದ ಎಲ್ಲ ಸಂಘ ಸಂಸ್ಥೆಗಳಿಗೆ, ಧರ್ಮಗುರುಗಳಿಗೆ, ಪಕ್ಷದ ನಾಯಕರಿಗೆ, ವರ್ಗದವರಿಗೆ ಪಕ್ಷಾತೀತವಾಗಿ ಆಹ್ವಾನ ನೀಡಿದ್ದೇವೆ. ನೀವು ಕೇವಲ ಒಂದು ದಿನ ಮಾತ್ರ ಬಂಧಿಸಬಹುದು. ಮರುದಿನ ಅದು ನಿಮ್ಮಿಂದ ಸಾಧ್ಯವಿಲ್ಲ. ನೀವು ಬಂಧಿಸಿದರೂ ನಾವು ಹೆದರುವುದಿಲ್ಲ. ಮರುದಿನ ಕರ್ಫ್ಯೂ ಇಲ್ಲ, ನೀವು ಎಲ್ಲಿ ನಿಲ್ಲಿಸಿರುತ್ತೀರೋ ಅಲ್ಲಿಂದಲೇ ನಡೆಯುತ್ತೇನೆ. ನನ್ನ ಮನೆ, ನನ್ನ ಊರು, ನನ್ನ ಕ್ಷೇತ್ರ, ನನ್ನ ರಾಜ್ಯ. ಯಾರೂ ಈ ಪಾದಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Read more
[wpas_products keywords=”deal of the day”]