Karnataka news paper

250 ಕೋಟಿ ರೂ. ವಂಚನೆ ಪ್ರಕರಣ: ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧಿಸಿದ ಇಡಿ


ANI

ಬೆಳಗಾವಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಸಹಾಕರ ಬ್ಯಾಂಕ್ ನಲ್ಲಿ 250 ಕೋಟಿ ರೂಪಾಯಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಪಿಎಂಎಲ್ ಎ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದಂತ ಇಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಿದ್ದಾರೆ.

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ನಿರ್ಮಿಸಿದ್ದ ಆನಂದ್ ಅಪ್ಪುಗೋಳ್ ಅವರು, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರೂ ಹೌದು. ಸೊಸೈಟಿಯಲ್ಲಿ ಅವ್ಯವಹಾರ ನಡೆಸಿರುವ ಅವರು ಸಾವಿರಾರು ಠೇವಣಿದಾರರಿಗೆ ಸುಮಾರು 250 ಕೋಟಿ ರೂ. ವಂಚಿಸಿದ್ದಾರೆ ಎಂಬ ಆರೋಪವಿದೆ.





Read more…

[wpas_products keywords=”party wear dress for women stylish indian”]