Karnataka news paper

ಕೋವಿಡ್ ನಿರ್ಬಂಧ ಪಾಲನೆ ಜೊತೆ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಕಾಲೇಜುಗಳ ಕಾರ್ಯನಿರ್ವಹಣೆಗೆ ಅನುಮತಿ


The New Indian Express

ಬೆಂಗಳೂರು: ಕೋವಿಡ್-19 ಮತ್ತು ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಎರಡು ವಾರಗಳ ಕಾಲ ರಾಜ್ಯದಲ್ಲಿ ಕೋವಿಡ್ ನಿರ್ಬಂಧ ತಂದಿದ್ದು, ಬೆಂಗಳೂರು ನಗರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳು ಮತ್ತು ಡಿಗ್ರಿ ಕಾಲೇಜುಗಳನ್ನು ಸದ್ಯಕ್ಕೆ ಮುಚ್ಚಲಾಗಿದೆ. 

ಕೆಲವು ವೃತ್ತಿಪರ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರ್ಕಾರ ಅನುಮತಿ ನೀಡಿದ್ದು  ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜುಗಳು ಕೋವಿಡ್-19 ಶಿಷ್ಠಾಚಾರಗಳ ಮಧ್ಯೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಕಾಲೇಜು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೋವಿಡ್-19 ಶಿಷ್ಠಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ವೀಕೆಂಡ್ ಕರ್ಫ್ಯೂ: ಅಡ್ವೊಕೇಟ್, ವಕೀಲರು, ಕಾನೂನಿಗೆ ಸಂಬಂಧಪಟ್ಟ ಸಂಸ್ಥೆಗಳು ಶೇಕಡಾ 50ರ ಕಚೇರಿ ಸಿಬ್ಬಂದಿ ಸಾಮರ್ಥ್ಯದಲ್ಲಿ ವಾರಾಂತ್ಯ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಗುರುತು ಪತ್ರ ತೋರಿಸಿ ಅಡ್ವೊಕೇಟ್ ಗಳು, ಲಾಯರ್ ಗಳು ಮತ್ತು ಅವರ ಸಿಬ್ಬಂದಿ ಓಡಾಡಬಹುದು ಎಂದು ಸೂಚಿಸಲಾಗಿದೆ.





Read more

[wpas_products keywords=”deal of the day”]