Karnataka news paper

ಮುಂಬೈನಲ್ಲಿ ಇಂದು 20,971 ಮಂದಿಗೆ ಕೊರೋನಾ ಪಾಸಿಟಿವ್, ಮುಂದಿನ ನಿರ್ಬಂಧಗಳ ಕುರಿತು ಸಿಎಂ ನಿರ್ಧರಿಸಲಿದ್ದಾರೆ ಎಂದ ಮೇಯರ್


The New Indian Express

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಶುಕ್ರವಾರ ಒಂದೇ 20,971 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಶೇ. 84 ರಷ್ಟು ಪ್ರಕರಣಗಳು ಲಕ್ಷಣರಹಿತವಾಗಿವೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಕೊರೋನಾದಿಂದ ಆರು ಮಂದಿ ಮೃತಪಟ್ಟಿದ್ದಾರೆ. ಪ್ರತಿದಿನ ಪಾಸಿಟಿವ್ ಪ್ರಕರಣಗಳು 20,000 ಗಡಿ ದಾಟುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ.

ಇದನ್ನು ಓದಿ: ದೈನಂದಿನ ಕೋವಿಡ್ ಪ್ರಕರಣಗಳು 20,000 ದಾಟಿದರೆ ಮುಂಬೈ ಲಾಕ್‌ಡೌನ್: ಮೇಯರ್ ಕಿಶೋರಿ ಪೆಡ್ನೇಕರ್

ನಗರದಲ್ಲಿ ರಾತ್ರಿ ಕರ್ಫ್ಯೂ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು, ನಗರದಲ್ಲಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಬೆಡ್ ಆಕ್ಯುಪೆನ್ಸಿ ಪ್ರಮಾಣ, ಆಮ್ಲಜನಕದ ಅವಶ್ಯಕತೆ ಮತ್ತು ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಇರುವುದರಿಂದ ಮುಂಬೈನಲ್ಲಿ ಲಾಕ್‌ಡೌನ್ ಅಥವಾ ಹೆಚ್ಚುವರಿ ನಿರ್ಬಂಧಗಳನ್ನು ಹೇರುವ ಅಗತ್ಯವಿಲ್ಲ ಎಂದು ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಚಹಾಲ್ ಅವರು ತಿಳಿಸಿದ್ದಾರೆ.



Read more

[wpas_products keywords=”deal of the day”]