Karnataka news paper

2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ


Online Desk

ಬೆಂಗಳೂರು: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. 
ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಇದನ್ನು ಓದಿ: ಬೆಂಗಳೂರು: ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯಲು ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದ ಶಾಲೆ!​

ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.



Read more

[wpas_products keywords=”deal of the day”]