Source : The New Indian Express
ನವದೆಹಲಿ: ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಅಗ್ನಿಶಾಮಕ ದಳದ ಪ್ರಕಾರ, ಇಂದು ಬೆಳಗ್ಗೆ 10.40ಕ್ಕೆ ಸ್ಫೋಟಕ್ಕೆ ಸಂಬಂಧಿಸಿದಂತೆ ಫೋನ್ ಕರೆ ಬಂದಿತು, ನಂತರ ಅಗ್ನಿಶಾಮಕ ವಾಹನವು ಸ್ಥಳಕ್ಕೆ ಧಾವಿಸಿತು.
ಸ್ಫೋಟಕ್ಕೆ ನಿಕರವಾದ ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಾಲಯದ ಕೊಠಡಿ ಸಂಖ್ಯೆ 102ರಲ್ಲಿ ಲ್ಯಾಪ್‌ಟಾಪ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಲ್ಯಾಪ್ಟಾಪ್ನ ಬ್ಯಾಟರಿ ಸ್ಫೋಟಗೊಂಡು ಈ ಬ್ಲಾಸ್ಟ್ ಉಂಟಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಕೋರ್ಟ್ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.