Karnataka news paper

ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ


Source : Online Desk

ಚೆನ್ನೈ:  ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಭಾನುವಾರ ಅವರು 71ನೇ ವರ್ಷಕ್ಕೆ ಕಾಲಿರಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. 

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೇರಿದಂತೆ ಹಲವು ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು, ಅಭಿಮಾನಿಗಳು, ರಜನಿ ಕಾಂತ್ ಉತ್ತಮ ಆರೋಗ್ಯ ಹೊಂದಿ, ಧೀರ್ಘ ಕಾಲ ಬಾಳಲಿ ಎಂದು ಆಶಿಸುತ್ತಾ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ.

ರಜನಿಕಾಂತ್ ತಮ್ಮ ಸೃಜನಶೀಲತೆ ಮತ್ತು ಅದ್ಭುತ ನಟನೆಯಿಂದ ಜನರನ್ನು ಪ್ರೇರೇಪಿಸುತ್ತಿರಲಿ. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ. 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ನೆಚ್ಚಿನ ನಟನಿಗೆ ಶುಭ ಸಂದೇಶ ಕಳುಹಿಸುತ್ತಿದ್ದಾರೆ.  

ಡಿಸೆಂಬರ್ 12, 1950 ರಂದು ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್, ಆರಂಭದಲ್ಲಿ ಬಿಎಂಟಿಸಿ ಬಸ್ ನಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸಿದ್ದರು. 1975ರಲ್ಲಿ ಕೆ. ಬಾಲಚಂದರ್ ಅವರ ತಮಿಳು ಸಿನಿಮಾ ಅಪೂರ್ವ ರಾಗಂಗಳ್ ಮೂಲಕ ಅವರು ಚಿತ್ರರಂಗ ಪ್ರವೇಶಿಸಿದರು. 

ರಜನಿಕಾಂತ್ ಅವರ ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮ ವಿಭೂಷಣ, ಎನ್ ಟಿಆರ್, ಪದ್ಮ ಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ. 
 





Read more…