Karnataka news paper

ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ; ಟೆಂಪಲ್‌ ರನ್‌ನಲ್ಲಿ ಡಿಕೆಶಿ


ಹೈಲೈಟ್ಸ್‌:

  • ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ
  • ಕಾರ್ಯಕ್ರಮದ ವೇದಕೆಯೂ ರೆಡಿ
  • ಟೆಂಪಲ್‌ ರನ್‌ನಲ್ಲಿ ಬ್ಯುಸಿಯಾಗಿರುವ ಡಿಕೆಶಿ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಟೆಂಪಲ್ ಹಾಗೂ ಮಸೀದಿ ರನ್‌ನಲ್ಲಿ ಬ್ಯುಸಿಯಾಗಿದ್ದಾರೆ.

ವೀಕೆಂಡ್ ಕರ್ಫ್ಯೂ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಸಾತನೂರಿನ ಕಬ್ಬಾಳಮ್ಮ ದೇಗುಲದಲ್ಲಿ ಶನಿವಾರ ಪೂಜೆ ಸಲ್ಲಿಸಿದರು.

ಅದಕ್ಕೂ ಮುನ್ನ ಅವರು ಕುಟುಂಬದ ಮನೆದೇವರು ಕನಕಪುರದ ಕೆಂಕೇರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಇನ್ನು ಮಾಧ್ಯಾಹ್ಮದ ಬಳಿಕ ಕನಕಪುರದ ಮಸೀದಿಗೂ ಡಿಕೆಶಿ ಭೇಟಿ ನೀಡಿದರು.

ಇನ್ನು ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು ಮೇಕೆದಾಟುನಲ್ಲಿ ಪಾದಯಾತ್ರೆ ಆರಂಭವಾಗುವ ಸ್ಥಳದಲ್ಲಿ ವೇದಿಕೆಯೂ ಸಜ್ಜಾಗುತ್ತಿದೆ. ಸುಮಾರು 80 ಜನರಿಗೆ ವೇದಿಕೆಯಲ್ಲಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ನಡುವೆ ಪಾದಯಾತ್ರೆಗೆ ಆರೋಗ್ಯ ಸಚಿವ ಸುಧಾಕರ್ ವಿರೋಧ ವ್ಯಕ್ತಪಡಿಸಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ಕಾನೂನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಮೇಕೆದಾಟು ಪಾದಯಾತ್ರೆ ಗೊಂದಲ; ಶಾಸಕರು, ಕೈ ಮುಖಂಡರ ಜೊತೆ ಡಿಕೆಶಿ ಸಭೆ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಭಾನುವಾರದಿಂದ ಪಾದಯಾತ್ರೆ ಆರಂಭಿಸಲಿದೆ. ಒಟ್ಟು 10 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಬಳಿಕ ಬೆಂಗಳೂರಿನಲ್ಲಿ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ.

ಕೋವಿಡ್ ನಿರ್ಬಂಧದ ನಡುವೆಯೂ ಪಾದಯಾತ್ರೆಯನ್ನು ನಡೆಸಿಯೇ ತೀರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಉದ್ದೇಶಪೂರ್ವಕವಾಗಿ ಪಾದಯಾತ್ರೆಯನ್ನು ತಡೆಯಲು ರಾಮನಗರ ಜಿಲ್ಲೆಯಲ್ಲಿ ನಿಶೇಧಾಜ್ಞೆ ಜಾರಿಮಾಡಲಾಗಿದೆ ಎಂದು ಸಿದ್ದರಾಮಯ್ಯನವರು ಆರೋಪ ಮಾಡಿದ್ದಾರೆ.

ಒಟ್ಟಿನಲ್ಲಿ ಕೋವಿಡ್ ನಿರ್ಬಂಧ ಹಾಗೂ ರಾಜ್ಯ ಸರ್ಕಾರದ ವಿರೋಧದ ನಡುವೆಯೂ ಪಾದಯಾತ್ರೆಯನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಇದಕ್ಕೆ ಅಂತಿಮ ಹಂತದ ಸಿದ್ಧತೆಗಳನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ.



Read more

[wpas_products keywords=”deal of the day sale today offer all”]