ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಳಸುವ ವಿಭಾಗದಲ್ಲಿ ಈ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನೀಶ್ ಮೌದ್ಗಿಲ್ ತಂಡಕ್ಕೆ ಈ ಪ್ರಶಸ್ತಿ ಸಂದಿದೆ.
ಐದು ಲಕ್ಷ ಕೋವಾಕ್ಸಿನ್‌ಗೆ ರೀಲೇಬಲ್; ಅವಧಿ ಮುಗಿದ ಲಸಿಕೆಗಳಿಗೆ ಮರುಜೀವ!
ಹೈದರಾಬಾದ್‌ನಲ್ಲಿ ನಡೆದ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಮನೀಶ್ ಮೌದ್ಗಿಲ್ ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿಯನ್ನು ಸ್ವೀಕರಿಸಿದ ಕೋವಿಡ್ ವಾರ್‌ರೂಮ್ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ‘‘ಇ-ಆಡಳಿತ ವಿಧಾನವು ಪರಿಸ್ಥಿತಿಯನ್ನು ಪರಿಣಾಕಾರಿಯಾಗಿ ನಿರ್ವಹಿಸುವಲ್ಲಿಪ್ರಮುಖ ಪಾತ್ರವಹಿಸುತ್ತದೆ’’ ಎಂದು ಹೇಳಿದ್ದಾರೆ.
‘‘ಕೋವಿಡ್ ವಾರಿಯರ್ಸ್‌ಗೆ ನಾವು ಸಪೋರ್ಟ್ ನೆಟ್‌ವರ್ಕ್ ಆಗಿದ್ದೇವೆ. ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿಯನ್ನು ನೀಡಿ ಜೀವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆ ಕೆಲಸ ಮಾಡುತ್ತಿದ್ದು, ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಹೆಚ್ಚಿನ ಸಿಬ್ಬಂದಿಗಳು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ’’ ಎಂದು ತಿಳಿಸಿದರು.
ಕೋವಿಡ್ ಸಿದ್ಧತೆ; ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಅಶ್ವತ್ಥನಾರಾಯಣ
2020ರ ಮಾರ್ಚ್‌ನಲ್ಲಿ ಕೋವಿಡ್ ಮೊದಲ ಅಲೆ ರಾಜ್ಯಕ್ಕೆ ಅಪ್ಪಳಿಸಿತ್ತು. ಮೊದಲ ಅಲೆ ಆರಂಭವಾದ 2- 3 ದಿನಗಳಲ್ಲಿ ವಾರ್‌ರೂಮ್ ಸ್ಥಾಪಿಸಲಾಗಿತ್ತು. ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು. ಸೋಂಕಿತರ ಸಂಪರ್ಕ ಪತ್ತೆ ಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ.
Read more
[wpas_products keywords=”deal of the day sale today offer all”]