Karnataka news paper

ನಟ ಮಹೇಶ್‌ ಬಾಬುಗೆ ಕೋವಿಡ್‌, ಇತ್ತ ಅಣ್ಣ ರಮೇಶ್‌ ಬಾಬು ನಿಧನ: ದುಃಖದಲ್ಲಿ ಕುಟುಂಬ


ಹೈದರಾಬಾದ್: ತೆಲುಗು ಹಿರಿಯ ನಟ ಕೃಷ್ಣ ಅವರ ಹಿರಿಯ ಪುತ್ರ, ನಟ ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು (56) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಯಕೃತ್ತಿಗೆ (ಲಿವರ್) ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ರಮೇಶ್‌ ನಿಧನಕ್ಕೆ ತೆಲುಗು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕುಟುಂಬದಿಂದ ಪತ್ರ: ರಮೇಶ್‌ ಬಾಬು ನಿಧನದ ಹಿನ್ನೆಲೆಯಲ್ಲಿ ಘಟ್ಟಮನೇನಿ ಕುಟುಂಬ ಪತ್ರ ಬರೆದಿದೆ. ‘ನಮ್ಮ ಪ್ರೀತಿಯ ರಮೇಶ್ ಬಾಬು ಅವರ ನಿಧನದ ಸಂಗತಿಯನ್ನು ನಾವು ತೀವ್ರ ದುಃಖದಿಂದ ಹೇಳುತ್ತಿದ್ದೇವೆ. ಅವರು ನಮ್ಮೆಲ್ಲರ ಹೃದಯದಲ್ಲಿ ಶಾಶ್ವತವಾಗಿ ಇರುತ್ತಾರೆ. ನಮ್ಮ ಎಲ್ಲಾ ಹಿತೈಷಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಅಂತ್ಯಕ್ರಿಯೆಯ ಸ್ಥಳದಲ್ಲಿ ಗುಂಪು ಸೇರುವುದನ್ನು ತಪ್ಪಿಸುವಂತೆ ನಾವು ವಿನಂತಿ ಮಾಡುತ್ತಿದ್ದೇವೆ’ ಎಂದು ಕುಟುಂಬದ ಕಡೆಯಿಂದ ತಿಳಿಸಲಾಗಿದೆ.

ನಟ, ನಿರ್ಮಾಪಕರಾಗಿ ‘ರಮೇಶ್’

ಹಿರಿಯ ನಟ ಕೃಷ್ಣ ಅವರ ಮೊದಲ ಪುತ್ರನಾಗಿದ್ದ ರಮೇಶ್‌ ಬಾಬು ಬಾಲ ನಟನಾಗಿ ಚಿತ್ರರಂಗ ಪ್ರವೇಶ ಮಾಡಿದ್ದರು. 1974ರಲ್ಲಿ ತೆರೆಕಂಡ ‘ಅಲ್ಲೂರಿ ಸೀತಾರಾಮರಾಜು’ ಚಿತ್ರದಲ್ಲಿ ಮೊದಲು ಬಣ್ಣ ಹಚ್ಚಿದ್ದರು. ಬಳಿಕ ನಿರ್ಮಾಪಕರಾಗಿ ಕೆಲಸ ಮಾಡಿದ ಅವರು, ಸಹೋದರ ಮಹೇಶ್‌ ಬಾಬು ಅವರ ಸಿನಿಮಾಗಳನ್ನು ನಿರ್ಮಿಸಿದ್ದರು. ಮಹೇಶ್ ನಟಿಸಿದ್ದ ‘ಅರ್ಜುನ್’, ‘ಅತಿಥಿ’, ‘ಆಗಡು‘ ಚಿತ್ರಗಳನ್ನು ನಿರ್ಮಿಸಿದ್ದರು.

ರಮೇಶ್ ಬಾಬು ನಿಧನಕ್ಕೆ ನಟ ಚಿರಂಜೀವಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶನಿವಾರ ಮಹೇಶ್‌ ಬಾಬು (46) ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದರು.

ಇದನ್ನೂ ಓದಿ… ‘ಬಾಹುಬಲಿ ಕಟ್ಟಪ್ಪ’ ಖ್ಯಾತಿಯ ನಟ ಸತ್ಯರಾಜ್‌ಗೆ ಕೋವಿಡ್‌ ದೃಢ: ಆಸ್ಪತ್ರೆಗೆ ದಾಖಲು



Read More…Source link

[wpas_products keywords=”deal of the day party wear for men wedding shirt”]