ರಾಮನಗರ: ಮೇಕೆದಾಟು ಯೋಜನೆಯ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಗಮದಲ್ಲಿ ಚಾಲನೆ ನೀಡುವ ಸಂದರ್ಭದಲ್ಲಿ ಎಡವಿದರು. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಇದನ್ನೇ ಅಸ್ತ್ರವಾಗಿಸಿರುವ ಬಿಜೆಪಿ, ‘ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಎಂದು ವ್ಯಂಗ್ಯವಾಡಿದೆ. ಈ ಕುರಿತು ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
Live | ಮೇಕೆದಾಟು: ಕಾಂಗ್ರೆಸ್ನಿಂದ ‘ನೀರಿಗಾಗಿ ನಡಿಗೆ’, ಸಂಗಮದಿಂದ ಪಾದಯಾತ್ರೆ ಆರಂಭ Live
ಸಂಗಮದಲ್ಲಿ ಸ್ನಾನ ಮುಗಿಸಿ ಪೂಜೆ ಮಾಡಲು ಕುಳಿತುಕೊಳ್ಳುವಾಗ ಶಿವಕುಮಾರ್ ಎಡವಿದರು.
ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ!#ಸುಳ್ಳಿನಜಾತ್ರೆ pic.twitter.com/xibQDTIyWw
— BJP Karnataka (@BJP4Karnataka) January 9, 2022
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ‘ಅಧಿಕಾರವಿದ್ದಾಗ ಮೇಕೆದಾಟು ಯೋಜನೆ ಬಗ್ಗೆ ನಿರ್ಲಕ್ಷ್ಯ ತೋರಿದ್ದ ಕಾಂಗ್ರೆಸ್ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೀದಿನಾಟಕ ಮಾಡುತ್ತಿದೆ. ಅಧಿಕಾರವಿದ್ದಾಗ ಇಲ್ಲದ ಇಚ್ಛಾಶಕ್ತಿ, ಚುನಾವಣೆಗಾಗಿ ಬಂದಿರುವ ಹಠಾತ್ ರಾಜಕೀಯ ಆಸಕ್ತಿ ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ಮೇಕೆದಾಟು ಯೋಜನೆ ಜಾರಿ ಮಾಡುವ ನೈಜ ಬದ್ಧತೆ ಇರುವುದು ಬಿಜೆಪಿಗೆ ಮಾತ್ರ’ ಎಂದು ಹೇಳಿದ್ದಾರೆ.
ಅಧಿಕಾರವಿದ್ದಾಗ ಮೇಕೆದಾಟು ಯೋಜನೆ ಬಗ್ಗೆ ನಿರ್ಲಕ್ಷ್ಯ ತೋರಿದ್ದ ಕಾಂಗ್ರೆಸ್ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಬೀದಿನಾಟಕ ಮಾಡುತ್ತಿದೆ.
ಅಧಿಕಾರವಿದ್ದಾಗ ಇಲ್ಲದ ಇಚ್ಛಾಶಕ್ತಿ, ಚುನಾವಣೆಗಾಗಿ ಬಂದಿರುವ ಹಠಾತ್ ರಾಜಕೀಯ ಆಸಕ್ತಿ ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ.
ಮೇಕೆದಾಟು ಯೋಜನೆ ಜಾರಿ ಮಾಡುವ ನೈಜ ಬದ್ಧತೆ ಇರುವುದು ಬಿಜೆಪಿಗೆ ಮಾತ್ರ pic.twitter.com/k1DnPDazhv
— Dr Sudhakar K (@mla_sudhakar) January 9, 2022
ಮೇಕೆದಾಟು ಜಲಾಶಯ ನಿರ್ಮಾಣದಿಂದ ಸಮುದ್ರಕ್ಕೆ ಹರಿದು ಹೋಗುವ ಕಾವೇರಿ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಬಹುದು. ಬೆಂಗಳೂರಿನ ಕುಡಿಯುವ ನೀರು, ವಿದ್ಯುತ್, ಕೃಷಿ, ನೀರಾವರಿ ಸೇರಿದಂತೆ ಮೇಕೆದಾಟು ಯೋಜನೆ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಲಿದೆ. ಅದಕ್ಕಾಗಿಯೇ ಈ ಐತಿಹಾಸಿಕ ಪಾದಯಾತ್ರೆ ಎಂದು ಕಾಂಗ್ರೆಸ್ ಬಣ್ಣಿಸಿದೆ.
ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್, ಕೃಷಿ, ನೀರಾವರಿ ಸೇರಿದಂತೆ ಮೇಕೆದಾಟು ಯೋಜನೆ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಲಿದೆ.
ಅಭಿವೃದ್ಧಿಯ ಚಿತ್ರಣವನ್ನೇ ಬದಲಿಸಬಲ್ಲ ಈ ಯೋಜನೆಯ ಕನಸು ಕಂಡು, ಸಾಕಾರಗೊಳಿಸುವ ನಿಟ್ಟಿನಲ್ಲಿ ಹಲವು ಹೆಜ್ಜೆ ಇಟ್ಟಿದ್ದೇವೆ, ಈಗ ಜಾರಿಗೆ ಒತ್ತಾಯಿಸಿ ಹೆಜ್ಜೆ ಇಡುತ್ತಿದ್ದೇವೆ.#MekedatuPadayatre pic.twitter.com/r53UMBEgPa
— Karnataka Congress (@INCKarnataka) January 9, 2022
Read more from source
[wpas_products keywords=”deal of the day sale today kitchen”]