Karnataka news paper

ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಮಕ್ಕಳನ್ನು ಕೊಂದು ಆತ್ಮಹತ್ಯೆ


Source : The New Indian Express

ಹೈದರಾಬಾದ್: 32 ವರ್ಷದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಕೊಂದು ತಾವು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 

ಇದನ್ನೂ ಓದಿ: ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಮತಾಂತರ ಯತ್ನ ಕಾರಣ; ಮಹಿಳೆ ಬಂಧನ!

ಸ್ವಾರ್ತಿ ಕುಸುಮಾ ಮತ್ತು ಪತಿ ಸಾಯಿಕುಮಾರ್ ಇಬ್ಬರೂ ಕೊರೊನಾ ಸಮಯದಲ್ಲಿ ಸಾಫ್ಟ್ ವೇರ್ ಉದ್ಯೋಗ ಕಳೆದುಕೊಂಡಿದ್ದರು. ಕೆಲಸ ಕಳೆದುಕೊಂಡ ನಂತರ ಸಾಯಿಕುಮಾರ್ ಕಾಲ್ ಸೆಂಟರ್ ನಲ್ಲಿ ಕಡಿಮೆ ಸಂಬಳಕ್ಕೆ ಸೇರಿಕೊಂಡಿದ್ದರು. ಸ್ವಾತಿ ಅವರು ಮನೆಯಲ್ಲೇ ಇದ್ದರು.

ಇದನ್ನೂ ಓದಿ: ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ  

ಪತಿ ಸಾಯಿಕುಮಾರ್ ಗೆ ಬರುತ್ತಿದ್ದ ಸಂಬಳ ಮಕ್ಕಳ ಫೀಸಿಗೂ ಸಾಕಾಗುತ್ತಿಲ್ಲವೆಂದು ಸ್ವಾತಿ ಚಿಂತಿತರಾಗಿದ್ದರು ಎನ್ನಲಾಗಿದೆ. ಸಾಯಿಕುಮಾರ್ ಕೆಲಸಕ್ಕೆ ತೆರಳಿದ್ದ ವೇಳೆ ಬೆಡ್ ರೂಮಿನಲ್ಲಿ ಆತ್ಮಹತ್ಯೆ ನೋಟ್ ಬರೆದು ಸ್ವಾತಿ 5 ವರ್ಷದ ಮಗ ಮಗು 3 ವರ್ಷದ ಮಗಳನ್ನು ಕೊಂದು ತಾವೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಇದನ್ನೂ ಓದಿ: ಮತ್ತೊಬ್ಬ ಯುವಕನ ಜತೆ ಮದುವೆ: ಪ್ರೇಮಿಗಳಿಬ್ಬರು ಕೆಆರ್ ಎಸ್ ಹಿನ್ನೀರಿಗೆ ಹಾರಿ ಆತ್ಮಹತ್ಯೆ



Read more