Karnataka news paper

ದಾವಣಗೆರೆ: ಹೊರ ರಾಜ್ಯದಿಂದ ಬರುವವರಲ್ಲಿ ಹೆಚ್ಚಿನ ಸೋಂಕು


ದಾವಣಗೆರೆ: ಜವಳಿ ನಗರಿಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ದಿನೇದಿನೆ ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ದಿಢೀರ್ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್‌ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದಾವಣಗೆರೆ ಬಸಾಪುರದ ಮಹೇಶ್ವರನ ವಿಶೇಷ ಜಾತ್ರೆ : ಇಲ್ಲಿ ಹೆಣ್ಣು ಮಕ್ಕಳಿಗೆ ಇಲ್ಲ ಪ್ರವೇಶ

ಪಿಐಸಿಯು ವಾರ್ಡ್‌ ಅನ್ನು ಸಂಪೂರ್ಣವಾಗಿ ಕೋವಿಡ್‌ಗಾಗಿ ಮೀಸಲಿಡಬೇಕು. ಎಲ್ಲ ಬೆಡ್‌ಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕು. ಹೊಸ ಮಾರ್ಗಸೂಚಿ ಪ್ರಕಾರ ರೋಗ ಲಕ್ಷಣ ಇಲ್ಲದವರನ್ನು ಮನೆಯಲ್ಲೇ ಇರುವಂತೆ ಮಾಡಬೇಕು. ಏಳು ದಿನಗಳ ಕಾಲ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಿಜಿ ಆಸ್ಪತ್ರೆಯಲ್ಲಿ ಕೋವಿಡ್‌ ಕಾರಣದಿಂದ ಒಟ್ಟು 9 ಮಂದಿ ದಾಖಲಾಗಿದ್ದಾರೆ. ಎಲ್ಲರೂ ಆಮ್ಲಜನಕ ವಾರ್ಡ್‌ನಲ್ಲೇ ಇದ್ದಾರೆ. ಐಸಿಯು ವಾರ್ಡ್‌ನಲ್ಲಿ ಯಾರೂ ಇಲ್ಲ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಆಸ್ಪತ್ರೆ ವೀಕ್ಷಣೆ ಮಾಡಿ ನಂತರ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ತಿಳಿಸಿದರು.

ಬೆಂಗಳೂರು, ತಮಿಳುನಾಡು ಹೀಗೆ ಹೊರ ಪ್ರದೇಶಗಳಿಗೆ ಪ್ರಯಾಣ ಮಾಡಿ ಬಂದವರೇ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ ಆರೋಗ್ಯವನ್ನು ಜಿಲ್ಲಾಧಿಕಾರಿ ವಿಚಾರಿಸಿದರು. ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ, ಕೇರಳದಿಂದ ಬಂದವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ಜನರು ಅನಗತ್ಯವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು ಎಂದು ತಿಳಿಸಿದರು.

ಅಗತ್ಯವಿದ್ದರೆ ಮಾಸ್ಕ್‌ ಹಾಕಿಯೇ ಹೊರಬರಬೇಕು. ಅಂತರ ಕಾಪಾಡಿಕೊಳ್ಳಬೇಕು. ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಬಾರದು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವರಿಷ್ಠಾಧಿಕಾರಿಗೆ ರೇಷ್ಮೆ ಸೀರೆ ಕಪ್ಪ, ಸ್ಥಳೀಯರಿಗೆ ಸಂಕಷ್ಟ; ಮೊಳಕಾಲ್ಮುರು ರೇಷ್ಮೆಗೆ ದುಸ್ವಪ್ನವಾದ ಸರಕಾರಿ

ಹೊರ ರಾಜ್ಯಗಳಿಂದ ಹಾಗೂ ಕೊರೊನಾ ಹೆಚ್ಚಿರುವ ಹೊರ ಜಿಲ್ಲೆಗಳಿಂದ ಬರುವವರ ಮೇಲೆ ಇಗಾ ಇಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದಲ್ಲಿ ಅವರು ಬಂದು ಇಳಿದ ಕೂಡಲೇ ಕ್ವಾರಂಟೈನ್‌ ವಿಧಿಸಲಾಗುತ್ತದೆ. ಏಳು ದಿನಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.



Read more

[wpas_products keywords=”deal of the day sale today offer all”]