Karnataka news paper

ಧಾರವಾಡ ಮೂಲದ ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ ನಿಧನ


The New Indian Express

ಧಾರವಾಡ: ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ(63ವ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಹಿರೇಮಠ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. 

ಅವರಿಗೆ ಪತ್ನಿ ಕಲಾವಿದೆ ವಿಶ್ವೇಶ್ವರಿ ಹಿರೇಮಠ ಮತ್ತು ಪುತ್ರ ಇದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರಿನವರಾದ ಬಸವಲಿಂಗಯ್ಯ ನೀನಾಸಂ ಶಿಕ್ಷಣ ಗಳಿಸಿದ್ದರು. ಸುಗಮ ಸಂಗೀತ ಕಲಾವಿದರಾಗಿ, ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿ ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆ ಅವರದ್ದು. ಅವರ ಹಾಡುಗಾರಿಕೆಗೆ ಎಲ್ಲರೂ ತಲೆಬಾಗುತ್ತಿದ್ದರು. 

ಅಮೆರಿಕ, ಇಂಗ್ಲೆಂಡ್, ದುಬೈ ಸೇರಿದಂತೆ ಹಲವು ವಿದೇಶಗಳಲ್ಲಿ ಕೃಷ್ಣ ಪಾರಿಜಾತ ಸಣ್ಣಾಟ ಪ್ರದರ್ಶಿಸಿ ಪ್ರಶಂಸೆಗೆ ಪಾತ್ರವಾಗಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನಗಳು, ಪ್ರಶಸ್ತಿಗಳು ಒಲಿದುಬಂದಿದ್ದವು. 





Read more

[wpas_products keywords=”deal of the day”]