Karnataka news paper

ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿತರಿಸಲು ಸೂಚನೆ


ಬೆಂಗಳೂರು: ಕೋವಿಡ್‌ ಕಾರಣಕ್ಕೆ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ತರಗತಿಗಳು ನಡೆಯದ ಕಾರಣ ಈ ಅವಧಿಯಲ್ಲಿನ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

1 ರಿಂದ 10ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ  ಆಹಾರ ಧಾನ್ಯಗಳನ್ನು ವಿತರಿಸುವಂತೆ ಸೂಚಿಸಲಾಗಿದೆ.

ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ– 2013 ಮತ್ತು ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳು– 2015ರ ಅನ್ವಯ ಈ ಕ್ರಮಕೈಗೊಳ್ಳುವಂತೆ
ಸೂಚಿಸಲಾಗಿದೆ.

ಸೆಪ್ಟೆಂಬರ್‌ ತಿಂಗಳಲ್ಲಿ 25 ದಿನಗಳು ಮತ್ತು ಅಕ್ಟೋಬರ್‌ ತಿಂಗಳಲ್ಲಿ 16 ದಿನಗಳ ಆಹಾರ ಧಾನ್ಯಗಳ ವಿತರಿಸಬೇಕು ಎಂದು ತಿಳಿಸಲಾಗಿದೆ. 

 



Read more from source

[wpas_products keywords=”deal of the day sale today kitchen”]