Online Desk
ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತದೇ ಇದ್ದು, ಇದರೊಂದಿಗೆ ಪಾಸಿಟಿವಿಟಿ ದರ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಇಂದು ಸಂಜೆ 4.30ಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ದೇಶದ ಕೊವಿಡ್ 19 ಪರಿಸ್ಥಿತಿ ಪರಿಶೀಲನೆ ನಡೆಯಲಿದೆ. ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,59,632 ಹೊಸ ಪ್ರಕರಣಗಳು ಪತ್ತೆಯಾಗಿದ್ದು 327 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,90,611ಕ್ಕೆ ತಲುಪಿದೆ.
ಭಾರತದಲ್ಲಿ ಸೋಮವಾರದಿಂದ ಮೂರನೇ ಡೋಸ್ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
Read more
[wpas_products keywords=”deal of the day”]