Karnataka news paper

ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ


Source : PTI

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ಭಾಗವಹಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ಕೆಂಪು ಟೋಪಿ ಉತ್ತರ ಪ್ರದೇಶಕ್ಕೆ ‘ರೆಡ್ ಅಲರ್ಟ್’: ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ​

“ಅಧ್ಯಕ್ಷ ಬೈಡೆನ್ ಅವರ ಆಹ್ವಾನದ ಮೇರೆಗೆ ಪ್ರಜಾಪ್ರಭುತ್ವದ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಸಂತೋಷವಾಗಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ನಮ್ಮ ಪಾಲುದಾರರೊಂದಿಗೆ ಕೆಲಸ ಮಾಡಲು ಭಾರತ ಸಿದ್ಧವಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಂತ್ರಜ್ಞಾನವು ಪ್ರಜಾಪ್ರಭುತ್ವವನ್ನು “ಸಕಾರಾತ್ಮಕವಾಗಿ ಅಥವಾ ಋಣಾತ್ಮಕವಾಗಿ” ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ತಂತ್ರಜ್ಞಾನ ಸಂಸ್ಥೆಗಳು ಪ್ರಜಾಪ್ರಭುತ್ವ ಸಮಾಜಗಳನ್ನು ಸಂರಕ್ಷಿಸಲು ಕೊಡುಗೆ ನೀಡಬೇಕು ಎಂದು ಗುರುವಾರ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಹೇಳಿದ್ದರು.

ಬೈಡೆನ್ ಅವರು ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.



Read more

Leave a Reply

Your email address will not be published. Required fields are marked *