Online Desk
ಹೈದರಾಬಾದ್: ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೌದು.. ಟಾಲಿವುಡ್‌ನಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು, ಕೋವಿಡ್ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿಂದೆ ಟಾಲಿವುಡ್ ನಟರಾದ ಮಹೇಶ್ ಬಾಬು, ಲಕ್ಷ್ಮಿ ಮಂಚು ಮತ್ತು ವಿಶ್ವಕ್ ಸೇನ್ ಸೇರಿದಂತೆ ಹಲವು ನಟರು COVID-19 ಸೋಂಕಿಗೆ ತುತ್ತಾಗಿದ್ದರು. ಇದೀಗ ರಾಜೇಂದ್ರ ಪ್ರಸಾದ್ ಅವರು ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟ ರಾಜೇಂದ್ರ ಪ್ರಸಾದ್ ಅವರು ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಪರೀಕ್ಷೆಗೆ ಮಾಡಿಸಿಕೊಂಡಿದ್ದರು. ಇದೀಗ ಅವರ ಪರೀಕ್ಷಾ ವರದಿ ಲಭ್ಯವಾಗಿದ್ದು, ವರದಿ ಪಾಸಿಟಿವ್ ಬಂದಿದೆ.
ವೈದ್ಯಕೀಯ ಪರೀಕ್ಷೆಗಳಲ್ಲಿ ಪಾಸಿಟಿವ್ ಎಂದು ದೃಢಪಟ್ಟ ನಂತರ ವೈದ್ಯರ ಸಲಹೆ ಮೇರೆಗೆ ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿರುವ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ರಾಜೇಂದ್ರ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದಿಬಂದಿದೆ.
ಇತ್ತೀಚೆಗಷ್ಟೇ ಟಾಲಿವುಡ್ ನಟರಾದ ಮಹೇಶ್ ಬಾಬು, ಲಕ್ಷ್ಮಿ ಮಂಚು ಮತ್ತು ವಿಶ್ವಕ್ ಸೇನ್ ಸೇರಿದಂತೆ ಹಲವು ನಟರು COVID-19 ಸೋಂಕಿಗೆ ತುತ್ತಾಗಿದ್ದರು. ಅಲ್ಲದೆ ತಮಿಳುನಟ ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಕೂಡ ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read more…
[wpas_products keywords=”party wear dress for women stylish indian”]