PTI
ನವದೆಹಲಿ: ದೆಹಲಿ ಸರ್ಕಾರ ಭಾನುವಾರ ವಲಸೆ ಕಾರ್ಮಿಕರು ಮತ್ತು ಉದ್ಯಮಿಗಳ ಆತಂಕವನ್ನು ನಿವಾರಿಸಿದ್ದು, ಜೀವನೋಪಾಯವನ್ನು ರಕ್ಷಿಸಲು ಕನಿಷ್ಠ ಕೋವಿಡ್ ನಿರ್ಬಂಧಗಳನ್ನು ಮಾತ್ರ ವಿಧಿಸಲಾಗುವುದು. ಲಾಕ್‌ಡೌನ್ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ನಿತ್ಯ 20 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ದೆಹಲಿ ಸರ್ಕಾರ ಮತ್ತೆ 2020 ರಂತೆ ಲಾಕ್ ಡೌನ್ ಮಾಡಬಹುದು ಎಂಬ ಆತಂಕ ವಲಸಿಗ ಕಾರ್ಮಿಕರನ್ನು ಕಾಡುತ್ತಿದೆ.
ಇದನ್ನು ಓದಿ: ದೆಹಲಿಯಲ್ಲಿ ಇಂದು 20,181 ಕೊರೋನಾ ಪಾಸಿಟಿವ್ ಪ್ರಕರಣಗಳು, ಏಳು ಮಂದಿ ಸಾವು
ಈ ಸಂಬಂಧ ಇಂದು ವರ್ಚುವಲ್ ಮೂಲಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಇದೆ ಮತ್ತು ಎಲ್ಲರೂ ಮಾಸ್ಕ್ ಧರಿಸಿದರೆ ಲಾಕ್‌ಡೌನ್ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.
“ಏರುತ್ತಿರುವ ಕೋವಿಡ್ ಪ್ರಕರಣಗಳು ಆತಂಕಕಾರಿ ವಿಷಯವಾಗಿದೆ. ಆದರೆ ಭಯಪಡುವ ಅಗತ್ಯವಿಲ್ಲ. ಕೆಲವೇ ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಾಸ್ಕ್ ಧರಿಸುವುದು ಬಹಳ ಮುಖ್ಯ. ನೀವು ಮಾಸ್ಕ್ ಧರಿಸುವುದನ್ನು ಮುಂದುವರಿಸಿದರೆ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಹೇರುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ” ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಈಗಾಗಲೇ ಕೆಲವು ನಿರ್ಬಂಧಗಳ ಜೊತೆಗೆ ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳನ್ನು ಘೋಷಿಸಿದೆ.
ಕೇಂದ್ರ ಸರ್ಕಾರ ಸಹ ಕೋವಿಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದ ಕೇಜ್ರಿವಾಲ್, “ಕನಿಷ್ಠ ನಿರ್ಬಂಧಗಳನ್ನು ವಿಧಿಸುವುದು ನಮ್ಮ ಪ್ರಯತ್ನವಾಗಿದೆ. ಇದರಿಂದ ಜೀವನೋಪಾಯಕ್ಕೆ ತೊಂದರೆಯಾಗುವುದಿಲ್ಲ” ಎಂದು ಹೇಳಿದ್ದಾರೆ.
Read more
[wpas_products keywords=”deal of the day”]