Online Desk
ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಸಂಬಂಧ ಖಚಿತ ಸುಳಿವು ಅನುಸರಿಸಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು. ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಹತ್ಯೆಯಾದ ಉಗ್ರರ ಯಾವ ಗುಂಪಿಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ಆಕ್ಷೇಪಾರ್ಹ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
Read more
[wpas_products keywords=”deal of the day”]