Online Desk
ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸ್ವಸ್ಥಗೊಂಡಿದ್ದು, ಮೇಕೆದಾಟು ಪಾದಯಾತ್ರೆಯಲ್ಲಿ ಮಂಗಳವಾರದಿಂದ ( ಜ.11) ಭಾಗವಹಿಸಲಿದ್ದಾರೆ.
ಸುಸ್ತು, ಜ್ವರದಿಂದ ಬಳಲಿದ್ದ ಅವರು ಬೆಂಗಳೂರಿಗೆ ವಾಪಾಸಾಗಿ ಕುಟುಂಬದ ವೈದ್ಯರಿಂದ ಚಿಕಿತ್ಸೆ ಪಡೆದು, ಅವರ ಸಲಹೆಯಂತೆ ವಿಶ್ರಾಂತಿ ಪಡೆದಿದ್ದರು.
ಇದನ್ನೂ ಓದಿ: ಸಿದ್ದು, ಡಿಕೆಶಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ? ಬಿಜೆಪಿ
ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಸೋಮವಾರ ಕೂಡಾ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಂಗಳವಾರದಿಂದ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
Read more
[wpas_products keywords=”deal of the day”]