Karnataka news paper

ಗೋವಾ: ಚುನಾವಣೆ ಹೊಸ್ತಿಲಲ್ಲಿ ಸಚಿವ, ಶಾಸಕ ಸ್ಥಾನಕ್ಕೆ ಬಿಜೆಪಿಯ ಮೈಕೆಲ್ ಲೋಬೋ ರಾಜೀನಾಮೆ


The New Indian Express

ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳು ಇರುವಂತೆಯೇ ಸಚಿವ ಹಾಗೂ ಬಿಜೆಪಿ ಶಾಸಕ ಸ್ಥಾನಕ್ಕೆ  ಮೈಕೆಲ್ ಲೋಬೋ  ಸೋಮವಾರ ರಾಜೀನಾಮೆ ನೀಡಿದ್ದಾರೆ. ಕಲಾಂಗುಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಲೋಬೋ ಅವರು ಮುಖ್ಯಮಂತ್ರಿ ಕಚೇರಿ ಮತ್ತು ಗೋವಾ ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.

‘ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ನೋಡುತ್ತೇನೆ. ಬಿಜೆಪಿಗೂ ಗುಡ್ ಬೈ ಹೇಳಿರುವುದಾಗಿ ರಾಜ್ಯ ತ್ಯಾಜ್ಯ ನಿರ್ವಹಣಾ ಇಲಾಖೆ ಸಚಿವರೂ ಆಗಿದ್ದ ಲೋಬೋ ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಲೋಬೊ, ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಕರಾವಳಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ಜನರು ಅತೃಪ್ತರಾಗಿದ್ದಾರೆ ಎಂದು ಕಿಡಿಕಾರಿದರು.

ತಳಮಟ್ಟದ ಕಾರ್ಯಕರ್ತರು ಪಕ್ಷದಿಂದ ಕಡೆಗಣಿಸಲ್ಪಟ್ಟಿದ್ದಾರೆ ಎಂದು ಹೇಳಿದ ಅವರು, ಬಿಜೆಪಿ ಇನ್ನು ಮುಂದೆ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ನನಗೆ ಹೇಳಿದ್ದಾರೆ ಎಂದರು. ಗೋವಾದ ಎಲ್ಲಾ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.

ಬಿಜೆಪಿ, ಕಾಂಗ್ರೆಸ್, ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಆಮ್ ಆದ್ಮಿ ಪಾರ್ಟಿ (ಎಎಪಿ), ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಮತ್ತು ಎನ್‌ಸಿಪಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿವೆ.



Read more

[wpas_products keywords=”deal of the day”]