ಹೈಲೈಟ್ಸ್:
- ರೇಣುಕಾಚಾರ್ಯ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ
- ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಶಾಸಕ ರೇಣುಕಾಚಾರ್ಯ
- ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಆರಗ ಆಕ್ಷೇಪ
ಶಾಸಕ ರೇಣುಕಾಚಾರ್ಯ ಅವರು ವೈಯಕ್ತಿಕವಾಗಿ ಭೇಟಿ ಆದ ಸಂದರ್ಭದಲ್ಲಿ ಈ ಕುರಿತಾಗಿ ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವರು, ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ. ಇದೇ ವಿಚಾರವಾಗಿ ಮಾತನಾಡಿದ ಅವರು, ರೇಣುಕಾಚಾರ್ಯ ಅವರಿಂದ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗಿರುವುದನ್ನು ನಾನು ಗಮನಿಸಿದ್ದೇನೆ, ರೇಣುಕಾಚಾರ್ಯ ಭಾಗವಹಿಸಿದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಫ್ಐಆರ್ ಆಗಿದೆ. ಯಾರ್ಯಾರು ಇದ್ದಾರೆ ಎಂಬುದರ ಬಗ್ಗೆ ತನಿಖೆ ಆಗುತ್ತಿದೆ. ಉಳಿದಿರುವ ವಿಚಾರವಾಗಿ ವಿವರಣೆ ಕೇಳಿದ್ದೇನೆ ಎಂದು ಹೇಳಿದರು.
ಕಾನೂನು ಎಲ್ಲರಿಗೂ ಒಂದೇ, ಕ್ರಮ ಕೈಗೊಳ್ಳಲಾಗುತ್ತದೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ, ಎಫ್ಐಆರ್‌ನಲ್ಲಿ ಶಾಸಕ ರೇಣುಕಾಚಾರ್ಯ ಹೆಸರು ಸೇರಿಸದ ಬಗ್ಗೆ ವಿವರಣೆ ಕೇಳುತ್ತೇನೆ. ಅವರು ನನ್ನನ್ನು ಭೇಟಿ ಆಗಿದ್ದಾರೆ, ನೀವು ಮಾಡಿದ್ದು ಅಪರಾಧ ಎಂದಿದ್ದೇನೆ. ಸರಿಯಲ್ಲ ಅದು, ಈ ರೀತಿ ಆದರೆ ಯಾರಿಗೆ ಹೇಳುವುದು? ಕೋವಿಡ್ ಹರಡುತ್ತಿರುವ ಸಂದರ್ಭದಲ್ಲಿ ಏಕೆ ಹೋದ್ರಿ ಎಂದು ಕೇಳಿದ್ದೇನೆ ಎಂದು ತಿಳಿಸಿದರು.
ಸೋಮವಾರ ಹೊನ್ನಾಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಜನರು ಭಾಗಿಯಾಗಿದ್ದರು. ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಎಂಪಿ ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ. ಇನ್ನೊಂದೆಡೆ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾದ 41 ಮಂದಿ ಕಾಂಗ್ರೆಸ್ ಮುಖಂಡರ ವಿರುದ್ಧ ಇಂದು ಮತ್ತೆ ಎಫ್‌ಐಆರ್ ದಾಖಲಿಸಲಾಗಿದೆ.
Read more
[wpas_products keywords=”deal of the day sale today offer all”]