Karnataka news paper

ಮಂಗಳೂರು ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ, 26 ಮಂದಿ ಅಸ್ವಸ್ಥ


ಹೈಲೈಟ್ಸ್‌:

  • ‘ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಮಂಗಳವಾರ ವಿಷಾನಿಲ ಅಮೋನಿಯಂ ಸೋರಿಕೆ
  • ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸಂಸ್ಥೆ
  • ಘಟನೆಯಲ್ಲಿ 26 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಮಂಗಳವಾರ ವಿಷಾನಿಲ ಅಮೋನಿಯಂ ಸೋರಿಕೆಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಒಟ್ಟು 26 ಮಂದಿ ಅಸ್ವಸ್ಥರಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥರಾಗಿದ್ದ 26 ಸಿಬ್ಬಂದಿಗಳನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೆಲವರು ಬಿಡುಗಡೆಯಾಗಿದ್ದು, ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Fire Engine

ವಿಷಾನಿಲ ಸೋರಿಕೆಯಾದ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕ ಸಿಬ್ಬಂದಿ

ಘಟನೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್‌ ಶಶಿಕುಮಾರ್‌ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿರುವ ಅವರು ಘಟನೆಯ ವಿವರ ನೀಡಿದ್ದು, ವಿಷಾನಿಲ ಸೋರಿಕೆ ಪ್ರಕರಣದಲ್ಲಿ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ನ 26 ಸಿಬ್ಬಂದಿ ಅಸ್ವಸ್ಥರಾಗಿದ್ದರು. ಇವರಲ್ಲಿ 10 ಮಂದಿ ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 16 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

Everest Seafoods Pvt. Ltd.

ಎವರೆಸ್ಟ್‌ ಸೀಫುಡ್ಸ್‌ ಪ್ರೈ. ಲಿ. ಸಂಸ್ಥೆಯಲ್ಲಿ ವಿಷಾನಿಲ ಸೋರಿಕೆಯಾದ ಜಾಗ

ಸಮಗ್ರ ತನಿಖೆ

ಅಮೋನಿಯಂ ಅನಿಲ ಸೋರಿಕೆ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಈ ಬಗ್ಗೆ ಅಧಿಕಾರಿಗಳು, ತಜ್ಞರು ತಪಾಸಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್‌ ವಿವರ ನೀಡಿದರು.



Read more

[wpas_products keywords=”deal of the day sale today offer all”]