Karnataka news paper

ಮೊದಲನೆ ಅಲೆಗೆ-ತಬ್ಲಿಘಿ, 3ನೇ ಅಲೆಗೆ ಕಾಂಗ್ರೆಸ್: ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ಸೋಂಕು ಹಬ್ಬಿಸುವುದು ನಿಮ್ಮ ಉದ್ದೇಶವೇ?


Online Desk

ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ವಾಗ್ದಾಳಿ ನಡೆಸಿದೆ, ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿಗಳಿಗೆ ಸಮ ಎಂದು ಕಿಡಿ ಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಾದಯಾತ್ರೆ ಮತ್ತು ತಬ್ಲಿಘಿ ಇಬ್ಬರೂ ಹರಡುತ್ತಿರುವುದು ಕೋವಿಡ್ ಸೋಂಕು. ತಬ್ಲಿಘಿಗಳು ಮೊದಲನೇ ಅಲೆಗೆ ಕಾರಣರಾದರೆ ಕಾಂಗ್ರೆಸ್ಸಿಗರು ಮೂರನೇ ಅಲೆಗೆ ಕಾರಣವಾಗುತ್ತಿದ್ದಾರೆ.

ಬೆಂಗಳೂರಿಗೆ ನೀರು ಹಂಚುವುದಕ್ಕಾಗಿ ಈ ಪಾದಯಾತ್ರೆ ಎಂದು ಸುಳ್ಳಿನ ಜಾತ್ರೆ ಮಾಡುತ್ತಿರುವ ಕಾಂಗ್ರೆಸ್, ವಾಸ್ತವದಲ್ಲಿ ಬೆಂಗಳೂರಿಗೆ ಕೋವಿಡ್ ರಫ್ತು ಮಾಡುತ್ತಿದೆ. ಈ ಮೂಲಕ ಕೋವಿಡ್ ಸೋಂಕಿತ ಕಾಂಗ್ರೆಸಿಗರು ಊರಿಗೆಲ್ಲ ಸೋಂಕು ಹಂಚುತ್ತಿದ್ದಾರೆ.  ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣವಾದರೆ ಕಾಂಗ್ರೆಸ್ ತಬ್ಲಿಘಿಗಳೇ ನೇರ ಹೊಣೆ.

ಇದನ್ನೂ ಓದಿ: ಬಿಜೆಪಿಯವರಿಗೆ ತಾಕತ್ತು, ಗಂಡಸ್ತನವಿದ್ದರೆ ಮೇಕೆದಾಟು ಯೋಜನೆ ಜಾರಿ ಮಾಡಿ ತೋರಿಸಲಿ: ಡಿ ಕೆ ಸುರೇಶ್

ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ,  ನಿಮ್ಮ  ಸುಳ್ಳಿನ ಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸುಳ್ಳಿನ ಜಾತ್ರೆ ಈಗ ಕೊರೋನಾ ಮೂರನೇ ಅಲೆಯ ಸೂಪರ್ ಸ್ಪ್ರೆಡರ್ ಆಗುತ್ತಿದೆ. ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ದೇಶವನ್ನು ಕಾಡಿದ್ದ ತಬ್ಲಿಘಿಗಳ ರೀತಿ ಈಗ ಡಿಕೆಶಿ ಸೋದರರು ಪಾದಯಾತ್ರೆಯ ನೆಪದಲ್ಲಿ ರಾಜ್ಯದಲ್ಲಿ ಕೊರೋನಾ ಹಂಚುತ್ತಿದ್ದಾರೆ. ಕೋವಿಡ್‌ ಸೂಪರ್ ಸ್ಪ್ರೆಡರ್ ಕಾಂಗ್ರೆಸ್ ಎಂದು ಟೀಕಿಸಿದೆ.





Read more

[wpas_products keywords=”deal of the day”]