ಬೆಂಗಳೂರಿನಲ್ಲಿ ಕುಖ್ಯಾತ ರೌಡಿ ಶೀಟರ್ ನರಸಿಂಹನ ಕಾಲಿಗೆ ಗುಂಡು ಹಾರಿಸಿ ಬಂಧನ..!
ಬೆಂಗಳೂರು ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು ಬೆಳಗ್ಗೆ 11.30ರ ಸುಮಾರಿಗೆ ಒಡವೆ ಬಿಚ್ಚಿ ಟೇಬಲ್ ಮೇಲಿರಿಸಿ ಸ್ನಾನಕ್ಕೆ ತೆರಳಿದ್ದರು. ಬಳಿಕ ಸ್ನಾನ ಮುಗಿಸಿ ವಾಪಸ್ ಬಂದು ನೋಡಿದಾಗ ಒಡೆವೆಗಳು ಕಳವಾಗಿದ್ದವು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ಕೈಗೊಂಡ ಮಾಗಡಿ ರಸ್ತೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಳ್ಳತನವೇ ಉದ್ಯೋಗ
ಕಳ್ಳತನವನ್ನೇ ಉದ್ಯೋಗವನ್ನಾಗಿ ಮಾಡಿಕೊಂಡಿದ್ದ ಆರೋಪಿಗಳು, ಈ ಹಿಂದೆ ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದರು. ಈ ವೇಳೆ ಜೈಲಿನಲ್ಲಿ ಮೂವರು ಸ್ನೇಹಿತರಾಗಿದ್ದರು. ಆರೋಪಿಗಳು ಜಾಮೀನು ಪಡೆದು ಹೊರಬಂದ ಬಳಿಕ ಒಟ್ಟಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದರು.
ಮೂವರು ದ್ವಿಚಕ್ರ ವಾಹನದಲ್ಲಿ ನಗರದ ವಿವಿಧ ಬಡಾವಣೆ ಸುತ್ತಾಡುತ್ತಿದ್ದರು. ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಕಳವು ಮಾಡುತ್ತಿದ್ದರು. ಕೆಲವು ಬಾರಿ ಹಗಲಿನ ವೇಳೆಯೂ ಕೂಡ ಬಾಗಿಲು ತೆರೆದಿರುವ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿ ಪರಾರಿಯಾಗುತ್ತಿದ್ದರು. ಬೀಗ ಹಾಕಿರುವ ಮನೆಗಳನ್ನು ಗುರುತಿಸಿದ ಬಳಿಕ ಇಬ್ಬರು ಬೀಗ ಮುರಿದು ಮನೆಯೊಳಗೆ ನುಗ್ಗಿದರೆ, ಮತ್ತೊಬ್ಬ ಖದೀಮ ಹೊರಗೆ ನಿಂತು ಕಾಯುತ್ತಿದ್ದ.
ಮನೆಯ ಕಡೆಗೆ ಯಾರಾದರೂ ಬರುತ್ತಿದ್ದರೆ ಒಳಗಿರುವ ಖದೀಮರಿಗೆ ಸುಳಿವು ನೀಡುತ್ತಿದ್ದ. ಈ ರೀತಿಯಾಗಿ ಮನೆಗಳಲ್ಲಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದರು. ಕದ್ದ ಚಿನ್ನಾಭರಣಗಳನ್ನು ಹೊರ ರಾಜ್ಯಗಳಲ್ಲೂ ಮಾರಾಟ ಮಾಡಿದ್ದಾರೆ.
ಸಂಕ್ರಾಂತಿ ಹಬ್ಬಕ್ಕೆ ವಾರಾಂತ್ಯ ಕರ್ಫ್ಯೂ ಅಡ್ಡಿ: ಮನೆಯಲ್ಲೇ ಹಬ್ಬ ಆಚರಿಸಲು ಜನ ಸಜ್ಜು..
ಆರೋಪಿಗಳ ಬಂಧನದಿಂದ ಮಾಗಡಿ ರಸ್ತೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಮನೆಗಳವು, ವಿಜಯನಗರ 2, ಕೆ.ಪಿ. ಅಗ್ರಹಾರ, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಲಾ ಒಂದು ಮನೆಗಳವು ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಪಿಗಳು ಇನ್ನೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನವಿದ್ದು, ಹೆಚ್ಚಿನ ವಿಚಾರಣೆಯಿಂದ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ವಿವರಿಸಿದರು.
Read more
[wpas_products keywords=”deal of the day sale today offer all”]