ANI
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ “ಸೌಮ್ಯ ರೋಗಲಕ್ಷಣಗಳೊಂದಿಗೆ” ಹೋಮ್ ಕ್ವಾರಂಟೈನ್‌ನಲ್ಲಿರುವುದಾಗಿ ಎಂದು ಸೋಮವಾರ ತಿಳಿಸಿದ್ದಾರೆ.
“ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಈಗ ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ಆಗುವಂತೆ ಮತ್ತು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸುತ್ತೇನೆ” ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದಾರೆ.
ಜನವರಿ 8 ರಂದು ರಾಜನಾಥ್ ಸಿಂಗ್ ಅವರು ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಿದ್ದರು, ಇದರಲ್ಲಿ 100 ಹೊಸ ಸೈನಿಕ ಶಾಲೆಗಳ ವಿದ್ಯಾರ್ಥಿನಿಯರಿಗೆ ಸಶಸ್ತ್ರ ಪಡೆ ಸೇರಲು ಅವಕಾಶ ನೀಡಿದ್ದರು.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,79,723 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ದೈನಂದಿನ ಪಾಸಿಟಿವ್ ಪ್ರಮಾಣ ಶೇಕಡಾ 13.29ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.
Read more
[wpas_products keywords=”deal of the day”]