ಹೈಲೈಟ್ಸ್:
- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ
- ಮತ್ತೆ ಬಂದ್ ಆಗುತ್ತಾ ಶಾಲೆ -ಕಾಲೇಜುಗಳು
- ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳುವುದೇನು?
”ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳೂ ಸರಿಯಾಗಿ ನಡೆದಿಲ್ಲ. ಪೋಷಕರು ಆತಂಕಕ್ಕೊಳಕಾಗುವ ಅವಶ್ಯಕತೆಯಿಲ್ಲ. ತಜ್ಞರು ಹೇಳುವ ಪ್ರಕಾರ ಈ ತಿಂಗಳು ಅಥವಾ ಮಾರ್ಚ್ ಮಧ್ಯದಲ್ಲಿ ಕೊರೊನಾ ಅಲೆ ಕಡಿಮೆಯಾಗಲಿದ್ದು ವಾರ್ಷಿಕ ಪರೀಕ್ಷೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ. ಯಾವುದೇ ತಾಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಅವಶ್ಯಕತೆಗನುಗುಣವಾಗಿ ಬಂದ್ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ವಿಶೇಷ ಅಧಿಕಾರ ನೀಡಲಾಗಿದೆ,” ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ 860 ಶಾಲಾ ಮಕ್ಕಳು 85 ಶಿಕ್ಷಕರಿಗೆ ತಗುಲಿದ ಕೊರೊನಾ ಮಹಾಮಾರಿ!
ರಾಜ್ಯಾದ್ಯಂತ ಜ.10ರ ವೇಳೆಗೆ 1ರಿಂದ 10ನೇ ತರಗತಿವರೆಗಿನ ಒಟ್ಟು 860 ಶಾಲಾ ವಿದ್ಯಾರ್ಥಿಗಳು ಹಾಗೂ 85 ಶಿಕ್ಷಕರು ಕೋವಿಡ್ ಸೋಂಕಿಗೀಡಾಗಿರುವುದು ಕಂಡುಬಂದಿದೆ. ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಶೈಕ್ಷಣಿಕ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾಜಿಲ್ಲೆಗಳಲ್ಲೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸೋಂಕು ತಗುಲಿದೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 160 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಯಾವುದೇ ಶಿಕ್ಷಕರಲ್ಲಿ ಸೋಂಕು ಕಂಡುಬಂದಿಲ್ಲ. ಬಳ್ಳಾರಿ ಜಿಲ್ಲೆಯಲ್ಲಿ 3 ವಿದ್ಯಾರ್ಥಿಗಳಿಗೆ, ಬೆಳಗಾವಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ13 ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕನಿಗೆ ಸೋಂಕು ತಗುಲಿದೆ.
Read more
[wpas_products keywords=”deal of the day sale today offer all”]