Karnataka news paper

ಕೊರೋನಾ ಎಫೆಕ್ಟ್: ಐಟಿ ರಿಟರ್ನ್ ಸಲ್ಲಿಕೆ ಗಡುವು ಮಾರ್ಚ್ 15 ರವರೆಗೆ ವಿಸ್ತರಣೆ


The New Indian Express

ನವದೆಹಲಿ: ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಿದೆ.

ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ 2021-2022ನೇ ಸಾಲಿನ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

ಇದನ್ನು ಓದಿ: ತೆರಿಗೆ ಪಾವತಿದಾರರಿಗೆ ಶಾಕ್: ಐಟಿ ರಿಟರ್ನ್ಸ್ ಸಲ್ಲಿಕೆಗೆ ಗಡುವು ವಿಸ್ತರಣೆ ಇಲ್ಲ ಎಂದ ಕೇಂದ್ರ ಸರ್ಕಾರ

ಈ ಹಿಂದೆ ಡಿಸೆಂಬರ್ 31ರ ಗಡುವನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.  ಆದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಸಮಸ್ಯೆಗಳ ಕುರಿತು ಹಲವು ಬಳಕೆದಾರರು ಟ್ವೀಟ್ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದರು.

ಡಿಸೆಂಬರ್ 31 ರ ಗಡುವು ಸಾಕಾಗುವುದಿಲ್ಲ ಎಂದು ಕೆಲವರು ಐಟಿ ಪೋರ್ಟಲ್ ಸಮಸ್ಯೆಗಳ ಸ್ಕ್ರೀನ್ ಶಾಟ್ ತೆಗೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು.



Read more…

[wpas_products keywords=”deal of the day”]