ಹೈಲೈಟ್ಸ್:
- ಟೆಸ್ಟ್ ಕ್ರಿಕೆಟ್‌ನಲ್ಲಿ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದ ನಾಯಕ ವಿರಾಟ್ ಕೊಹ್ಲಿ.
- ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ.
- ಮೂರನೇ ಟೆಸ್ಟ್ ಎರಡನೇ ದಿನ ಈ ನೂತನ ಮೈಲುಗಲ್ಲು ಸ್ಥಾಪಿಸಿದ ಭಾರತದ ನಾಯಕ.
ಬುಧವಾರ ದಕ್ಷಿಣ ಆಫ್ರಿಕಾ ತಂಡದ ಪ್ರಥಮ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಿದರು. 56ನೇ ಓವರ್‌ನಲ್ಲಿ ಮೊಹಮ್ಮದ್ ಶಮಿ ಎಸೆತದಲ್ಲಿ ತೆಂಬಾ ಬವೂಮ ಅವರ ಕ್ಯಾಚ್ ಅನ್ನು ಪಡೆಯುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆಗೆ ಭಾಜನರಾಗಿದ್ದಾರೆ.
ಮೈದಾನದಲ್ಲಿ ಈ ಸಾಧನೆ ಮಾಡಿದ ವಿಕೆಟ್ ಕೀಪರ್ ಅಲ್ಲದ ಭಾರತದ 6ನೇ ಫೀಲ್ಡರ್ ಎಂಬ ಕೀರ್ತಿಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಭಾರತ ತಂಡದ ಪರ ಎರಡನೇ ದಿನ ಎರಡನೇ ಸೆಷನ್‌ನಲ್ಲಿ ಮೊಹಮ್ಮದ್ ಶಮಿ ಅದ್ಭುತವಾಗಿ ಬೌಲ್ ಮಾಡಿದ್ದರು. ಆ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ ಎರಡು ನಿರ್ಣಾಯಕ ವಿಕೆಟ್‌ಗಳನ್ನು ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 210 ರನ್‌ಗಳಿಗೆ ಆಲ್‌ಔಟ್ ಮಾಡುವಲ್ಲಿ ತಂಡಕ್ಕೆ ನೆರವಾಗಿದ್ದರು.
ಭಾರತ Vs ದಕ್ಷಿಣ ಆಫ್ರಿಕಾ 3ನೇ ಟೆಸ್ಟ್ ಸ್ಕೋರ್‌ಕಾರ್ಡ್
ಕಳೆದ ಎರಡು ವರ್ಷಗಳಿಂದ ಬ್ಯಾಟಿಂಗ್‌ನಲ್ಲಿ ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದ ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ನಿರ್ಣಾಯಕ ಅರ್ಧಶತಕ ಸಿಡಿಸಿದ್ದರು. ಒಟ್ಟು 201 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ ಒಂದು ಸಿಕ್ಸರ್ ಹಾಗೂ 12 ಮನಮೋಹಕ ಬೌಂಡರಿಗಳೊಂದಿಗೆ 79 ರನ್ ಗಳಿಸಿದ್ದರು. ಆ ಮೂಲಕ 71ನೇ ಶತಕ ಪೂರೈಸುವ ಹಾದಿಯಲ್ಲಿ ಮುನ್ನುಗ್ಗುತ್ತಿದ್ದರು. ಆದರೆ, ಮತ್ತೊಂದು ತುದಿಯಲ್ಲಿ ಅವರಿಗೆ ಯಾರೂ ಸಾಥ್ ನೀಡದ ಕಾರಣ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಮುಂದಾಗಿ ವಿಕೆಟ್ ಒಪ್ಪಿಸಿದ್ದರು.
ಇದರ ಹೊರತಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆಯುವ ಮೂಲಕ ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ ಅವರನ್ನು ಕೊಹ್ಲಿ ಹಿಂದಿಕ್ಕಿದರು. ರಾಹುಲ್ ದ್ರಾವಿಡ್ ಹರಿಣಗಳ ವಿರುದ್ಧ 624 ರನ್‌ಗಳನ್ನು ಬಾರಿಸಿದ್ದಾರೆ. ಈಗ ದ್ರಾವಿಡ್ ಅವರನ್ನು ಹಿಂದಿಕ್ಕಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತದ ಎರಡನೇ ಶ್ರೇಷ್ಠ ಬ್ಯಾಟ್ಸ್‌ಮನ್ ಆಗಿ ಕೊಹ್ಲಿ ಹೊರಹೊಮ್ಮಿದ್ದಾರೆ.
ಬುಮ್ರಾ ದಾಳಿಗೆ ಆಫ್ರಿಕಾ 210ಕ್ಕೆ ಆಲ್‌ಔಟ್: ಭಾರತಕ್ಕೆ 70 ರನ್ ಮುನ್ನಡೆ!
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ 1992-2011ರವರೆಗೆ ಸಚಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 1161 ರನ್‌ಗಳನ್ನು ಬಾರಿಸಿದ್ದಾರೆ.
ಇನ್ನು ಪಂದ್ಯದಲ್ಲಿ ಜಸ್‌ಪ್ರಿತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 76.3 ಓವರ್‌ಗಳಲ್ಲಿ 210 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 13 ರನ್ ಗಳಿಸಿದೆ. ಅತ್ಯುತ್ತಮ ಬೌಲಿಂಗ್ ದಾಳಿ ಮಾಡಿದ ಜಸ್‌ಪ್ರಿತ್ ಬುಮ್ರಾ 5 ವಿಕೆಟ್ ಸಾಧನೆ ಮಾಡಿದರು.
ಕ್ರಿಕೆಟ್ ಸುದ್ದಿ ಶಮಿಗೆ ಪದೇ-ಪದೆ ವಾರ್ನಿಂಗ್ ಕೊಡುತ್ತಿದ್ದ ಅಂಪೈರ್ ವಿರುದ್ಧ ಕೊಹ್ಲಿ ಗರಂ!
Read more
[wpas_products keywords=”deal of the day gym”]