Karnataka news paper

ಸಿಎಂ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್: ಐಸೋಲೇಷನ್’ನಲ್ಲಿ ಆರೋಗ್ಯ ಸಚಿವ ಸುಧಾಕರ್


The New Indian Express

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊರೋನಾ ಪಾಟಿಸಿವ್ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸ್ವಯಂಪ್ರೇರಿತರಾಗಿ ಐಸೋಲೇಷನ್’ಗೊಳಗಾಗಿದ್ದಾರೆ. 

ಸೋಮವಾರ ಸಂಜೆ ಮಾಡಿದ ಅಬಾಟ್ ಐಡಿ ಪರೀಕ್ಷೆಯು ನೆಗೆಟಿವ್ ಬಂದಿದೆ, ಇದೀಗ ಆರ್‌ಟಿ-ಪಿಸಿಆರ್ ಪರೀಕ್ಷೆಗೊಳಗಾಗಿದ್ದೇನೆ. ಈ ವರದಿಯೂ ನೆಗೆಟಿವ್ ಬಂದಿದ್ದೇ ಆದರೆ, ಬುಧವಾರದಿಂದ ಕೆಲಸ ಪುನರಾರಂಭಿಸುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ, ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ: ಪುತ್ರ, ಸೊಸೆಗೂ ಕೋವಿಡ್ ಪಾಸಿಟಿವ್

ನಾನು ಸಂಪೂರ್ಣವಾಗಿ ಲಕ್ಷಣರಹಿತವಾಗಿದ್ದರೂ ಮತ್ತು ಆರೋಗ್ಯ ಉತ್ತಮವಾಗಿದ್ದರೂ, ಜವಾಬ್ದಾರಿಯುತ ನಾಗರಿಕನಾಗಿ ನಾನು ಇತರರ ಆರೋಗ್ಯ ಮತ್ತು ಸುರಕ್ಷತೆಯನ್ನು ಪರಿಗಣಿಸಿ ಎರಡು ದಿನಗಳವರೆಗೆ ಸ್ವಯಂ-ಐಸೋಲೇಷನ್’ಗೆ ಒಳಗಾಗುತ್ತಿದ್ದೇನೆ. ನನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಮತ್ತು ವರ್ಚುವಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಡಾ ಸುಧಾಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. 

ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ ಹಾಗೂ ಇತರೆ ಹಲವು ಹಿರಿಯ ನಾಯಕರಿಗೆ ಕೋವಿಡ್‌ ಪಾಸಿಟಿವ್‌ ಬಂದಿದೆ.



Read more

[wpas_products keywords=”deal of the day”]