Online Desk
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ಸೋಂಕಿಗೆ ತಗುಲಿರುವ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಸಂಜೆ 4:30ಕ್ಕೆ ಕರೆ ಬೊಮ್ಮಾಯಿಗೆ ಕರೆ ಮಾಡಿದ ಪ್ರಧಾನಿ, ಮುಖ್ಯಮಂತ್ರಿಗಳ ಜೊತೆ ಐದು ನಿಮಿಷಗಳ ಕಾಲ ದೂರವಾಣಿಯಲ್ಲಿ ಚರ್ಚೆ ನಡೆಸಿದರು.
ಇದನ್ನು ಓದಿ: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ, ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ: ಪುತ್ರ, ಸೊಸೆಗೂ ಕೋವಿಡ್ ಪಾಸಿಟಿವ್
ತಮಗೆ ಸೋಂಕು ದೃಢಪಟ್ಟಿರುವ ಬಗ್ಗೆ ಮೋದಿಯೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ, ತಮ್ಮ ಕುಟುಂಬದ ಇನ್ನಿಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದರು.
ಇದೇ ವೇಳೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಬೊಮ್ಮಾಯಿಗೆ ಪ್ರಧಾನಿ ಸಲಹೆ ನೀಡಿದ್ದಾರೆ.
ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಮೋದಿಗೆ ಮಾಹಿತಿ ನೀಡಿದ ಸಿಎಂ, ಜನೆವರಿ 13ರ ಕೋವಿಡ್ ಪೂರ್ವಭಾವಿ ಸಭೆಗೂ ಮುನ್ನ ಇಂದು ಅಧಿಕಾರಿಗಳ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ್ದೇವೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿಗೆ ಮನವರಿಕೆ ಮಾಡಿದ್ದಾರೆ.
Read more
[wpas_products keywords=”deal of the day”]