ಹೈಲೈಟ್ಸ್:
- ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂವಾದ
- ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಬಗ್ಗೆ ಸಮಾಲೋಚನೆ
- ಕಳೆದ ವಾರ ತಜ್ಞರು, ಅಧಿಕಾರಿಗಳ ಜತೆಗೆ ಉನ್ನತ ಮಟ್ಟದ ಸಭೆ ನಡೆಸಿದ್ದ ಮೋದಿ
ಭಾರತದಲ್ಲಿ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆ ಎರಡೂವರೆ ಲಕ್ಷ ಸಮೀಪ ದಾಖಲಾಗಿದ್ದು, ದಿನದಿಂದ ದಿನಕ್ಕೆ ಭಾರಿ ಏರಿಕೆ ಕಾಣುತ್ತಿದೆ. ಈ ಹೊಸ ಕೋವಿಡ್ ಅಲೆಯು ಅಧಿಕ ಪ್ರಸರಣ ಶಕ್ತಿಯುಳ್ಳ ಓಮಿಕ್ರಾನ್ ತಳಿ ಸೋಂಕಿನಿಂದ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ಅನೇಕ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಜನರ ಗುಂಪುಗೂಡುವಿಕೆ ಮುಂತಾದವುಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ.
ಸಾಕಷ್ಟು ಮೆಡಿಕಲ್ ಆಕ್ಸಿಜನ್ ಸಿದ್ಧವಾಗಿಟ್ಟುಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸೂಚನೆ
ಕಳೆದ ವಾರ ಕೂಡ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ನಡೆಸಿದ್ದರು. ಆರೋಗ್ಯ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸಿದ್ಧತೆ, ಲಸಿಕೆ ಅಭಿಯಾನದ ಸ್ಥಿತಿಗತಿ, ಓಮಿಕ್ರಾನ್ ತಳಿಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಸಮಾಲೋಚನೆ ಮಾಡಿದ್ದರು. ಸಭೆ ವೇಳೆ ಆರೋಗ್ಯ ಕಾರ್ಯದರ್ಶಿ, ಜಾಗತಿಕ ಕೋವಿಡ್ ಪ್ರಕರಣಗಳ ಏರಿಕೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದರು.
ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಆರೋಗ್ಯ ಮೂಲಸೌಕರ್ಯ ಖಾತರಿಪಡಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ ನೀಡಿದ್ದರು. ಅಧಿಕ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳ ಮೇಲೆ ತೀವ್ರ ನಿಗಾ ಇರಿಸಲು ಹಾಗೂ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು, ಹೆಚ್ಚು ಪ್ರಕರಣಗಳನ್ನು ಕಾಣುತ್ತಿರುವ ರಾಜ್ಯಗಳಿಗೆ ಅಗತ್ಯ ತಾಂತ್ರಿಕ ನೆರವು ಒದಗಿಸಲು ನಿರ್ದೇಶಿಸಿದ್ದರು.
ಎಲ್ಲರಿಗೂ ಓಮಿಕ್ರಾನ್ ತಗುಲುವುದು ನಿಶ್ಚಿತ, ಅದನ್ನು ಬೂಸ್ಟರ್ ಡೋಸ್ ತಡೆಯಲಾರದು: ತಜ್ಞರ ಅಭಿಮತ
‘ಪರೀಕ್ಷೆಗಳು, ಲಸಿಕೆಗಳು ಮತ್ತು ಜಿನೋಮ್ ಸೀಕ್ವೆನ್ಸಿಂಗ್ ಸೇರಿದಂತೆ ಔಷಧೀಯ ವಿಷಯಗಳಲ್ಲಿನ ನಿರಂತರ ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ಪ್ರಧಾನಿ ಮಾತನಾಡಿದ್ದರು’ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿತ್ತು.
ಭಾರತದಲ್ಲಿ ಗುರುವಾರ 2.47 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ 13ಕ್ಕೆ ಏರಿಕೆಯಾಗಿದೆ.
Read more
[wpas_products keywords=”deal of the day sale today offer all”]