Karnataka news paper

ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್‌


ಬೆಂಗಳೂರು: ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ (79) ಅವರಿಗೆ ಕೋವಿಡ್‌–19 ದೃಢಪಟ್ಟಿದೆ.

‘ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಹಾಗೂ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದಾರೆ. ಅವರು ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ, ಆದರೆ ಮುನ್ನೆಚ್ಚರಿಕೆಯ ಡೋಸ್‌ ಪಡೆಯಲು ಇನ್ನೂ ಅರ್ಹರಾಗಿಲ್ಲ’ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾವೇರಿ–ಅರ್ಕಾವತಿಯ ‘ಸಂಗಮ’ದಿಂದ ಭಾನುವಾರ ಆರಂಭಿಸಿದ 10 ದಿನಗಳ ಪಾದಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು. ಸಂಗಮದಲ್ಲಿ ನಿರ್ಮಿಸಿದ್ದ ಬೃಹತ್‌ ವೇದಿಕೆಯಲ್ಲಿ, ಎಐಸಿಸಿ ಪ್ರತಿನಿಧಿಯಾಗಿ ಬಂದಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ನಗಾರಿ ಬಾರಿಸಿ ಪಾದಯಾತ್ರೆಗೆ ಚಾಲನೆ ನೀಡಿದ್ದರು.

ಖರ್ಗೆ ಅವರ ದೆಹಲಿಯ ಕಚೇರಿಯ ಕೆಲವು ಸಿಬ್ಬಂದಿಗೂ ಕೋವಿಡ್ ದಢಪಟ್ಟಿದೆ ಎಂದು ಖರ್ಗೆ ಅವರ ಆಪ್ತ ಮೂಲಗಳು ತಿಳಿಸಿವೆ.

ಪಾದಯಾತ್ರೆಯ ಉದ್ಘಾಟನೆಯ ವೇಳೆ ವೇದಿಕೆಯಲ್ಲಿದ್ದ ಕಾಂಗ್ರೆಸ್ ಮುಖಂಡರಾದ ವೀರಪ್ಪ ಮೊಯಿಲಿ, ಮುಲ್ಲಾಜಮ್ಮ, ಎಚ್.ಎಂ. ರೇವಣ್ಣ ಸೇರಿದಂತೆ ಹಲವರಿಗೆ ಈಗಾಗಲೇ ಕೋವಿಡ್ ದೃಢಪಟ್ಟಿದೆ.

ಇನ್ನಷ್ಟು ಓದು….



Read more from source

[wpas_products keywords=”deal of the day sale today kitchen”]