Karnataka news paper

ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್‌ ದೃಢ!


ಕಲಬುರಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಈ ಕುರಿತು ಅವರ ಕಾರ್ಯದರ್ಶಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ಜ. 12ರಂದು ನಡೆಸಿದ ಆರ್‌ಟಿಪಿಸಿಆರ್ ಟೆಸ್ಟ್‌ನಲ್ಲಿ ಮಲ್ಲಿಕಾರ್ಜುಬ ಖರ್ಗೆ ಅವರಿಗೆ ಕೊರೋನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಪ್ರಸ್ತುತ ಮಲ್ಲಿಕಾರ್ಜುನ ಖರ್ಗೆಯವರು ಹೋಮ್ ಐಸೋಲೇಷನ್‌ನಲ್ಲಿ ಇದ್ದಾರೆ. ಅವರು ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದು, ಎರಡನೆಯ ಡೋಸ್ ಪಡೆದ ನಂತರ 9 ತಿಂಗಳು ಅವಧಿ ಪೂರ್ಣಗೊಳಿಸಬೇಕಾಗಿರುವುದರಿಂದ ಅವರು ಇನ್ನೂ ಕೂಡ ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿಲ್ಲ.
ಕಾನೂನು ಉಲ್ಲಂಘನೆ ಮಾಡಿದ್ರೆ ಒಂದು ಹೆಜ್ಜೆನೂ ಮುಂದೆ ಹೋಗೋಕೆ ಬಿಡಲ್ಲ; ಅಶ್ವತ್ಥ್‌ ನಾರಾಯಣ್
ದೆಹಲಿ ಕಚೇರಿಯ ಐವರು ಸಿಬ್ಬಂದಿ ಸೇರಿದಂತೆ ಕಾರ್ಯದರ್ಶಿಗಳಿಗೆ ಕೂಡಾ ಕೊರೋನಾ ಪಾಸಿಟಿವ್ ಆಗಿದ್ದು ಅವರೆಲ್ಲ ಹೋಮ್ ಐಸೋಲೇಷನ್‌ನಲ್ಲಿದ್ದು ಸುಧಾರಿಸಿಕೊಳ್ಳುತ್ತಿದ್ದಾರೆ. ಹಿರಿಯ ನಾಗರಿಕರು ಸೇರಿದಂತೆ ಅರ್ಹರಿರುವ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿರುವುದಾಗಿ ಖರ್ಗೆ ಅವರ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಕಳೆದೆರಡು ದಿನಗಳಿಂದ ಖರ್ಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಲಾಗಿದೆ.

ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್‌ ಆಯೋಜಿಸಿರುವ ಮೇಕೆದಾಟು ಪಾದಯಾತ್ರೆ ಹೋರಾಟದಲ್ಲೂ ಭಾಗಿಯಾಗಿದ್ದರು. ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿರುವುದರಿಂದ ಅವರು ಶೀಘ್ರ ಗುಣಮುಖರಾಗಲೆಂದು ರಾಜಕೀಯ ಮುಖಂಡರು ಸೇರಿದಂತೆ ಅನೇಕರು ಹಾರೈಸುತ್ತಿದ್ದಾರೆ.



Read more

[wpas_products keywords=”deal of the day sale today offer all”]