Karnataka news paper

ಸಚಿವ ಡಾ. ನಾರಾಯಣಗೌಡಗೆ ಕೊರೋನಾ ಪಾಸಿಟಿವ್


Online Desk

ಬೆಂಗಳೂರು: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಸ್ವತಃ ಸಚಿವ ನಾರಾಯಣಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೋನಾ ಪಾಸಿಟಿವ್

ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ. 





Read more

[wpas_products keywords=”deal of the day”]